ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ
ಮೈಸೂರು ಗ್ರಾಮಾಂತರ

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ

March 9, 2020

ಹುಣಸೂರು, ಮಾ.7(ಕೆಕೆ)-ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧಿಸಿ ಸೋತ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಎದೆಗುಂದಬಾರದು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜೆಡಿಎಸ್‍ನಿಂದ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಪರಭವಗೊಂಡ ಅಭ್ಯರ್ಥಿಗಳಿಗೆ ಅತ್ಮಸ್ಥೈರ್ಯ ತುಂಬಿ, ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ವಿಧಾನಾಸಭಾ ಚುನಾವಣೆಯಲ್ಲಿ ಪಕ್ಷ ಬಹುಮತವಿಲ್ಲದ ಕಾರಣ ಅನ್ಯ ಪಕ್ಷದ ಜೊತೆಗೆ ಕೈ ಜೋಡಿಸಿ ಸಮಿಶ್ರ ಸರ್ಕಾರ ರಚಿಸಬೇಕಾಯಿತ್ತು. ಅ ವೇಳೆ ನಾವು ಮಂಡಿಸಿದ್ದ ಬಜೆಟ್ ಈ ವರೆಗೂ ಮುಂದುವರೆದಿದೆ. ಪ್ರಸ್ತುತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದರುವ ಬಜೆಟ್ ಬಂಡವಾಳ ಸ್ವಲ್ಪದಿನಗಳಲ್ಲೇ ಮತದಾರರಿಗೆ ತಿಳಿಯಲ್ಲಿದೆ ಎಂದು ಟೀಕಿಸಿದರು.

ತಾಲೂಕಿನಲ್ಲಿ ಜೆಡಿಎಸ್ ಗಟ್ಟಿಯಾಗಿದ್ದು, ಕಳೆದ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಿತು. ಆದರೆ ಗೆದ್ದ ಅಭ್ಯರ್ಥಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರಿಂದ ಸಮ್ಮಿಶ್ರ ಸರ್ಕಾರ ಪಥನವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಪಚುನಾವಣೆಯಲ್ಲೂ ಜೆಡಿಎಸ್ ಕಾರ್ಯಕರ್ತರು ಮೋದಿ ಅಲೆಯಲ್ಲಿ ಬಿಜೆಪಿ ಗೆಲುತ್ತದೆ ಎಂಬ ಭೀತಿಯಿಂದ ಕಾಂಗ್ರೆಸ್‍ಗೆ ಮತ ಹಾಕಿದ್ದರಿಂದ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆ ಉಂಟಾಯಿತು. ಮುಂದೆ ಕಾರ್ಯಕರ್ತರ ಸಭೆ ಹಾಗೂ ಪದಾಧಿಕಾರಿಗಳ ಬದಲಾವಣೆ ಮೂಲಕ ಪಕ್ಷ ಸಂಘಟಿಸುವ ಕೆಲಸ ಮಾಡಲಾಗುವುದು ಎಂದರು.

ಇದೇ ವೇಳೆ 7 ಜನ ನಗರಸಭಾ ಸದಸ್ಯರಿಗೆ ಹಾಗೂ ಸೋತ 23 ಮಂದಿಯನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಾರಾ.ಮಹೇಶ್ ಮುಖಂಡ ದೇವರಹಳ್ಳಿ ಸೋಮಶೇಖರ್, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಜಿಪಂ ಮಾಜಿ ಸದಸ್ಯ ಹೆಚ್.ಎಂ.ಫಜಲುಲ್ಲಾ, ಕಾರ್ಯದರ್ಶಿ ಆರ್.ಸ್ವಾಮಿ, ನಗರಸಭೆಯ ನೂತನ ಸದಸ್ಯರಾದ ಶ್ರೀನಾಥ್, ರಾಣಿ ಪೆರುಮಾಳ್, ಶರವಣ, ಕೃಷ್ಣರಾಜಗುಪ್ತ, ರಾಧಾ, ಸಾಯಿನ್‍ತಾಜ್, ಮುಖಂಡರಾದ ಚಿಕ್ಕಹುಣಸೂರು ಗೋವಿಂದೇಗೌಡ, ಹೊಸೂರು ಅಣ್ಣಯ್ಯ, ಪೆರುಮಾಳ್, ಶಿವರಾಜು, ಚಂದ್ರಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Translate »