ದೆಹಲಿಯಲ್ಲಿ ಹಿಂಸಾಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ವಿಷಾದ ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳ ಕೈವಾಡ ಶಂಕೆ
ಮೈಸೂರು

ದೆಹಲಿಯಲ್ಲಿ ಹಿಂಸಾಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ವಿಷಾದ ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳ ಕೈವಾಡ ಶಂಕೆ

January 28, 2021

ಬೆಂಗಳೂರು, ಜ.27(ಕೆಎಂಶಿ)- ರೈತರ ಐತಿಹಾಸಿಕ ಹೋರಾ ಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರ ದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಸರಣಿ ಟ್ವೀಟ್ ಮಾಡಿದ ಅವರು, ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದಿದ್ದಾರೆ. ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು ಎಂದರು. ನಾಲ್ವರು ರೈತ ಮುಖಂ ಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾ ಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿ ದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ, ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ. ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿ ರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದಿದ್ದಾರೆ.

Translate »