ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಹಾಗೂ ಇತರೆ ವಾಹನಗಳ ನಡುವೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ 5 ವಾಹನಗಳು ಜಖಂಗೊಂಡಿವೆ.
ಅಪಘಾತದ ಆಘಾತದಿಂದಾಗಿ ಮಾಜಿ ಮುಖ್ಯಮಂತ್ರಿಗಳ ಬೆಂಗಾವಲು ವಾಹನದಲ್ಲಿದ್ದ ಜಿಲ್ಲಾ ಸಶಸ್ತ್ರ ಪಡೆಯ ಸಬ್ ಇನ್ಸ್‍ಪೆಕ್ಟರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದರು. ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆ ಯುವುದನ್ನು ತಪ್ಪಿಸಲು ಸಿದ್ದರಾಮಯ್ಯ ಅವರ ಪೈಲಟ್ ವಾಹನ ಬಲಬದಿಗೆ ಚಲಿ ಸಿದೆ. ಈ ವೇಳೆ ಸಿದ್ದರಾಮಯ್ಯ ಅವರ ಕಾರನ್ನು ಹಿಂಬಾಲಿಸುತ್ತಿದ್ದ ಬೆಂಗಾವಲು ವಾಹನ (ಕೆಎ11 ಜಿ591)ಕ್ಕೆ ಸಣ್ಣದಾಗಿ ಅಪ ಘಾತ ಸಂಭವಿಸಿದೆ.
ಒಂದು ವಾಹ ನದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಒಂದರ ಹಿಂದೆ ಒಂದು ಬಂದ 5 ಕಾರು ಗಳೂ ಡಿಕ್ಕಿ ಹೊಡೆದು ಈ ಸರಣಿ ಅಪಘಾತ ಸಂಭವಿಸಿದೆ. ಈ ಸಂಬಂಧ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನದಲ್ಲಿದ್ದ ಜಿಲ್ಲಾ ಸಶಸ್ತ್ರ ಪಡೆಯ ಸಬ್ ಇನ್ಸ್‍ಪೆಕ್ಟರ್ ಮರೀಗೌಡರು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ತಾವು ವಾಸವಿದ್ದ ಮಂಡ್ಯದ ಪೊಲೀಸ್ ಕ್ವಾರ್ಟರ್ಸ್‍ಗೆ ತೆರಳಿದ ಮರೀಗೌಡರಿಗೆ ಹೃದಯಾಘಾತ ಸಂಭವಿಸಿ ಅವರು ಸಾವನ್ನಪ್ಪಿದರು.