ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು

ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

July 8, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿದ್ದಾರೆ. ತಮ್ಮ ಆಪ್ತ ರಾದ ಮಾವಿನಹಳ್ಳಿ ಸಿದ್ದೇಗೌಡರ ಪತ್ನಿ ಶ್ರೀಮತಿ ನಾಗರತ್ನ ಅವರು ನಿಧನರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಮೀಪ ವಿರುವ ಮಾವಿನಹಳ್ಳಿ ಸಿದ್ದೇಗೌಡರ ನಿವಾಸಕ್ಕೆ ತೆರಳಿ ನಾಗರತ್ನ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಚುನಾವಣೆ ಮುಗಿದು ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಬಳಿಕ ಮೈಸೂರಿಗೆ ಆಗಮಿಸಿದ ಅವರು, ನಂತರ ರಾಮಕೃಷ್ಣನಗರದ ತಮ್ಮ ನಿವಾಸಕ್ಕೆ ತೆರಳಿ, ವಿಶ್ರಾಂತಿ ಪಡೆದರು. ಸಂಜೆ ವಿವಾಹ ಮಹೋತ್ಸವವೊಂದರಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ಭಾನುವಾರವೂ ಮೈಸೂರಿನಲ್ಲಿ ವಾಸ್ತವ್ಯ ಹೂಡುವರು ಎಂದು ಹೇಳಲಾಗಿದೆ. ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು, ಲೋಕಸಭಾ ಚುನಾವಣೆ ಸಂಬಂಧ ಆಪ್ತ ರೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Translate »