ಆ.11ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರ ಆಡಳಿತ ಕುರಿತ ಕೃತಿ ಬಿಡುಗಡೆ
ಮೈಸೂರು

ಆ.11ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರ ಆಡಳಿತ ಕುರಿತ ಕೃತಿ ಬಿಡುಗಡೆ

August 9, 2019

ಮೈಸೂರು, ಆ.8(ಪಿಎಂ)- ಬೆಂಗಳೂರಿನ ಜನಮನ ಪ್ರಕಾಶನದ ವತಿಯಿಂದ `ಸಿದ್ದರಾಮಯ್ಯ ಆಡಳಿತ-ಅಂತರಂಗ-ಬಹಿರಂಗ : ವರ್ತ ಮಾನದ ಇತಿಹಾಸ’ ಕೃತಿ ಬಿಡುಗಡೆ ಸಮಾರಂಭವನ್ನು ಬೆಂಗ ಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆ.11ರಂದು ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನೀಡಿದ ಆಡಳಿತ ನಿರ್ವಹಣೆಯನ್ನು ಕೇಂದ್ರವಾಗಿಸಿಕೊಂಡು ಈ ಕೃತಿ ಹೊರತರಲಾಗಿದೆ. ಅಂದು ಬೆಳಿಗ್ಗೆ 11ಕ್ಕೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಡೋಜ ಹೆಚ್.ಎಸ್.ದೊರೆಸ್ವಾಮಿ ಕೃತಿ ಬಿಡುಗಡೆ ಮಾಡಲಿದ್ದಾರೆ ಎಂದರು. ವಿಧಾನಸಭಾ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ, ಸಂಸ್ಕøತಿ ಚಿಂತಕ ಡಾ.ಕೆ.ಮರುಳಸಿದ್ದಪ್ಪ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದಾರೆ. ಕೃತಿ ಸಂಪಾದಕ ಕಾ.ತ.ಚಿಕ್ಕಣ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ವಿಶ್ವಕರ್ಮ ಮಹಾ ಮಂಡಲದ ಜಿಲ್ಲಾಧ್ಯಕ್ಷ ಸಿ.ಟಿ.ಆಚಾರ್ಯ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಎನ್.ಆರ್. ನಾಗೇಶ್, ಕಾಂಗ್ರೆಸ್ ಮುಖಂಡ ಡೈರಿ ವೆಂಕಟೇಶ್ ಸುದ್ದಿಗೋಷ್ಠಿಯಲ್ಲಿದ್ದರು.

Translate »