ಬಾದಾಮಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ
ಮೈಸೂರು

ಬಾದಾಮಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

July 1, 2018

ಬೆಂಗಳೂರು: ಬಾದಾಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬಾದಾಮಿ ವ್ಯಾಪ್ತಿಯಲ್ಲಿ ನೀರಿನ ಅಭಾವದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು,ಕೂಡಲೇ ಪಾರ್ವತಿ ಕೆರೆ,ಗಂಜಿಕೆರೆ ಹಾಗೂ ಹಿರೇಕೆರೆಗಳಿಗೆ ನೀರು ತುಂಬಿಸಿ ನೆರವಾಗುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಕೆರೆ ತುಂಬಿಸುವ ಯೋಜನೆಗಳಿಗೆ 12 ಕೋಟಿ ವೆಚ್ಚವಾಗಲಿದೆ ಎನ್ನುವ ಅಂದಾಜು ಪಟ್ಟಿಯನ್ನು ಪತ್ರದೊಂದಿಗೆ ಲಗತ್ತಿಸಿರುವ ಸಿದ್ದರಾಮಯ್ಯ ಸ್ಥಳೀಯರ ಅಭಿಪ್ರಾಯ, ಮನವಿಗಳನ್ನೂ ಉಲ್ಲೇಖಿಸಿ ಕೆರೆ ತುಂಬಿಸಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಬಾದಾಮಿಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್, ಪವರ್ ಲೂಮ್ ಪಾರ್ಕ್ ನಿರ್ಮಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ ಇದೀಗ ಸಿಎಂಗೆ ಎರಡನೇ ಪತ್ರ ಬರೆದು ಕೆರೆಗಳನ್ನು ತುಂಬಿಸುವಂತೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಆದರೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಸೋಲನನುಭವಿಸಿದ್ದರೂ ಕೂಡ ಬಾದಾಮಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಗೆಲುವು ಸಾಧಿಸಿದ್ದರು.

Translate »