ಇಂದು ಜಿಲ್ಲಾ ಕಸಾಪದಿಂದ ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ-ಒಂದು ನೆನಪು
ಮೈಸೂರು

ಇಂದು ಜಿಲ್ಲಾ ಕಸಾಪದಿಂದ ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ-ಒಂದು ನೆನಪು

January 12, 2021

ಮೈಸೂರು,ಜ.11(ಎಂಟಿವೈ)-ಮೈಸೂರಿನ ವಿಜಯನಗರದ 1ನೇ ಹಂತದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ನಾಳೆ (ಜ.12) ಸಂಜೆ 5ಕ್ಕೆ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ- ಒಂದು ನೆನಪು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಅಭಿ ನಂದನಾ ಸಮಾರಂಭವನ್ನು ಆಯೋಜಿ ಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಡಾ.ಕೆ.ಎಸ್. ಗೌಡಯ್ಯ ಪ್ರತಿಷ್ಠಾನದ ಸಹಯೋಗದಲ್ಲಿ ನಾಳೆ ಸಂಜೆ 5ಕ್ಕೆ ವಿಜಯನಗರದ 1ನೇ ಹಂತದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ವಿಧಾನ ಸಭೆ ಮಾಜಿ ಸ್ಪೀಕರ್ ಕೃಷ್ಣ ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತ ಕೃಷ್ಣ ಪ್ರಸಾದ್ ದಿಕ್ಸೂಚಿ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎ. ಹೆಚ್. ವಿಶ್ವನಾಥ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಪಾಲ್ಗೊ ಳ್ಳಲಿದ್ದಾರೆ. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರಾದ ಸಿ.ಆರ್.ರಂಗಶೆಟ್ಟಿ, ಎಂ.ಬಿ.ಹಾಲೇಗೌಡ, ವೇದಾಂಬ ವೆಂಕಟಾಚಲಯ್ಯ ಅವರನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ ಅಭಿನಂದಿಸಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಕಸಾಪ ಗೌರವ ಕೋಶಾಧ್ಯಕ್ಷ ರಾಜಶೇಖರ್ ಕದಂಬ, ಗೌರವ ಕಾರ್ಯದರ್ಶಿ ಕೆ.ಎಸ್.ನಾಗರಾಜು, ಗೌಡಯ್ಯ ಪ್ರತಿಷ್ಠಾನದ ಜಿ.ಬೆನಕ ಪ್ರಸಾದ್ ಇನ್ನಿತರರಿದ್ದರು.

Translate »