ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ಖಂಡನೆ
ಮೈಸೂರು

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಮಾಜಿ ಸಿಎಂ ಯಡಿಯೂರಪ್ಪ ಖಂಡನೆ

December 19, 2021

ಮೈಸೂರು,ಡಿ.18 (ಎಂಟಿವೈ)- ಬೆಳ ಗಾವಿಯಲ್ಲಿ ಎಂಇಎಸ್ ಕಾರ್ಯ ಕರ್ತರು ಪುಂಡಾಟಿಕೆ ಮೆರೆದು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿರುವುದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಪದೇ ಪದೆ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಪುಂಡರ ವಿರುದ್ಧ ನಿರ್ದಾ ಕ್ಷಿಣ್ಯ ಕ್ರಮ ಜರುಗಿಸುವ ಅಗತ್ಯವಿದೆ. ಕನ್ನಡದ ನೆಲದಲ್ಲಿ ಇದ್ದುಕೊಂಡು ಉದ್ಧ ಟತನದಿಂದ ವರ್ತಿಸುವುದನ್ನು ಸಹಿಸಲು ಆಗುವುದಿಲ್ಲ. ಭಾಷೆ, ನಾಡಿನ ವಿಚಾರ ದಲ್ಲಿ ಯಾರೂ ವಿರೋಧಿತನದ ಕೆಲಸ ಮಾಡಬಾರದು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಮುಲಾ ಜಿಲ್ಲದೆ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಸಲಹೆ ನೀಡಿದ್ದೇನೆ ಎಂದರು.
ಎಂಇಎಸ್‍ನವರು ಆಗಿಂದಾಗ್ಗೆ ಪುಂಡಾ ಟಿಕೆ ಮೆರೆದು ಜನರಲ್ಲಿ ಅಶಾಂತಿ ಮೂಡಿ ಸುವ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಯಲ್ಲಿ ಕನ್ನಡಿಗರ ಮೇಲೆ ದರ್ಪ ಮೆರೆ ಯುವುದಕ್ಕೆ ಸರ್ಕಾರ ಬಿಡಲ್ಲ. ಅಂತಹ ವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಬೆಳಗಾವಿಯಲ್ಲಿ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಕನ್ನಡಿಗರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ. ಪುಂಡಾಟಿಕೆ ಮರುಕಳಿಸದಂತೆ ಕಟ್ಟೆಚ್ಚರ ವಹಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

ಎಂಇಎಸ್ ಕಾರ್ಯಕರ್ತರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಹಾನಿ ಮಾಡಿ ರುವುದು ಖಂಡನೀಯ. ಯಾವುದೇ ಮಹನೀಯರ ಪ್ರತಿಮೆಗೆ ಹಾನಿ ಮಾಡು ವುದು ಅಕ್ಷಮ್ಯ ಅಪರಾಧ. ಯಾವುದೇ ಸಂದರ್ಭದಲ್ಲಿ ನಾವು ಅಗೌರವ ತೋರಿ ಸುವ ಕೆಲಸ ಮಾಡಬಾರದು. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಅದ್ಧೂರಿ ಸ್ವಾಗತ: ಗಣಪತಿ ಆಶ್ರಮದಲ್ಲಿ ನಿರ್ಮಿಸಿರುವ ಕಾರ್ಯಸಿದ್ಧಿ ಹನುಮಾನ್ ದೇವಾಲಯವನ್ನು ಲೋಕಾರ್ಪಣೆ ಮಾಡಲು ಮೈಸೂರಿಗೆ ಆಗಮಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸ ಲಾಯಿತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ.ರಾಜೀವ್, ಕರ್ನಾಟಕ ಕಾಂಪೆÇೀಸ್ಟ್ ನಿಗಮದ ಅಧ್ಯಕ್ಷ ಎಸ್.ಮಹದೇವಯ್ಯ, ಕರ್ನಾಟಕ ಮೃಗಾ ಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಖಾದಿ ಗ್ರಾಮೋ ದ್ಯೋಗ ಮಂಡಳಿ ಅಧ್ಯಕ್ಷ ಎನ್.ಆರ್. ಕೃಷ್ಣಪ್ಪಗೌಡ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗ ಮದ ಮಾಜಿ ಅಧ್ಯಕ್ಷ ಆರ್.ರಘು ಕೌಟಿಲ್ಯ, ಮುಡಾ ಸದಸ್ಯೆ ಎಸ್.ಲಕ್ಷ್ಮೀದೇವಿ, ಮೈಮುಲ್ ನಿರ್ದೇಶಕ ಎಸ್.ಸಿ.ಅಶೋಕ್, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್. ಶ್ರೀವತ್ಸ, ಪ್ರಧಾನ ಕಾರ್ಯದರ್ಶಿಗಳಾದ ವಿ.ಸೋಮಸುಂದರ್, ವಾಣೀಶ್‍ಕುಮಾರ್ ಮುಖಂಡರಾದ ಜೋಗಿ ಮಂಜು, ರಮೇಶ್, ಈಶ್ವರ್, ದೇವರಾಜೇಗೌಡ, ಜಯಂತಿ ಇನ್ನಿತರರು ಪಾಲ್ಗೊಂಡಿದ್ದರು.

Translate »