ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸರ್ಕಾರ ಪತನ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ

ಚಾಮರಾಜನಗರ:  ಮುಂಬರುವ ಲೋಕಸಭಾ ಚುನಾವ ಣೆಗೂ ಮುನ್ನವೇ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಜನ ಸಾಮಾನ್ಯರಿಗೆ ಭಾರ ಆಗಿದೆ. ಆಡಳಿತ ವೈಫಲ್ಯವಾಗಿದೆ, ಆಡಳಿತ ಕೇಂದ್ರ ವಿಧಾನ ಸೌಧದಲ್ಲಿ ವರ್ಗಾವಣೆ ದಂಧೆ ವಿಪರೀತ ವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಇಷ್ಟು ಭ್ರಷ್ಟ್ಟಾಚಾರ ನಡೆಸುವ ಸರ್ಕಾರವನ್ನು ನಾನೂ ಎಂದೂ ಕಂಡಿರಲಿಲ್ಲ. ನಾವು ಅಧಿಕಾರದಲ್ಲಿ ಇರುವ ಮೂರು-ನಾಲ್ಕು ತಿಂಗಳವರೆಗೆ ಲೂಟಿ ಮಾಡೋಣ ಎಂದು ಭಾವಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಯಾರಿಗೂ ಆಸಕ್ತಿ ಇಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎನ್ನುವ ಪರಿಸ್ಥಿತಿ ಇದೆ. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸರ್ಕಾರ ಪತನ ವಾಗಲಿದ್ದು, ಬಿಜೆಪಿ ಮತ್ತೊಮ್ಮೆ ಅಧಿ ಕಾರಕ್ಕೆ ಬರಲಿದೆ ಎಂದರು.

ರಾಜ್ಯ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಜೆಡಿಎಸ್ ಮುಖಂಡರಿಗೆ ಹಾಗೂ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಲ್ಲಿ ಅಸಮಾಧಾನ ಇದೆ.

ಈ ಸರ್ಕಾರದ ಅವಧಿ ತಾತ್ಕಾಲಿಕ, ಕುಂಟುತ್ತಾ ಸಾಗಿರುವ ರಾಜ್ಯ ಸರ್ಕಾರ ಇನ್ನೆಷ್ಟು ದಿನ ಅಧಿಕಾರ ದಲ್ಲಿ ಇರುತ್ತೋ ಗೊತ್ತಿಲ್ಲ ಎಂದು ಟೀಕಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತದ ಗೌರವವನ್ನು ಇಡೀ ಪ್ರಪಂಚಕ್ಕೆ ಪಸರಿಸಿದ್ದಾರೆ. ಪಾಕಿಸ್ತಾನದ ಗೂಂಡಾ ವರ್ತನೆಗೆ ಸರಿಯಾದ ಉತ್ತರ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತಮ ಆಡಳಿತ ನೀಡುವ ಮೂಲಕ ಜನ-ಸಾಮಾನ್ಯರ ಮನಸ್ಸಿನಲ್ಲಿ ನರೇಂದ್ರ ಮೋದಿ ಇದ್ದಾರೆ. ಹೀಗಾಗಿ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಾನು ಹಿಂದುಳಿದ ವರ್ಗದವನು. ನಾನು ಹಿಂದುಳಿದ ವರ್ಗದ ನಾಯಕ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ಅ ವರ್ಗದ ಮತ ಪಡೆದು ಮತ್ತೇ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿದ್ದರು. ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ನಡುವೆ ಗೊಂದಲ ಸೃಷ್ಠಿಸಿ ದರು. ಕೇವಲ 38 ಸ್ಥಾನ ಪಡೆದ ಜೆಡಿಎಸ್‍ಗೆ ಬೆಂಬಲ ನೀಡಿದ್ದು, ಕಾಂಗ್ರೆಸ್‍ಗೆ ನಾಚಿಕೆ ಆಗಬೇಕು, ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ್ ಸವದಿ, ಮಾಜಿ ಸಚಿವ ನಾರಾಯಣ ಸ್ವಾಮಿ, ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಜಿಲ್ಲಾ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜು ನಪ್ಪ, ರಾಜ್ಯ ಕಾರ್ಯದರ್ಶಿ ರಾಜೇಂದ್ರ ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.