ಮೈಸೂರು: ಕೇರಳದ ಮಾಜಿ ರಾಜ್ಯಪಾಲ ಬಿ. ರಾಚಯ್ಯನವರ ಮೊಮ್ಮಗಳು ಹಾಗೂ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿಯವರ ಸಹೋದರಿಯ ಪುತ್ರಿ ಸುಹಾ ಸಿನಿ (30) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ನಿವೃತ್ತ ಕೆಎಎಸ್ ಅಧಿಕಾರಿ ಪುಟ್ಟಮಾದಯ್ಯ ಮತ್ತು ಶ್ರೀಮತಿ ಉಮಾ ದಂಪತಿಯ ಪುತ್ರಿಯಾದ ಇವರನ್ನು ಚೊಚ್ಚಲ ಹೆರಿಗೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಸುಂದರವಾದ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಸುಹಾಸಿನಿ ಅವರು ಮೃತಪಟ್ಟಿದ್ದಾರೆ. ಮಗು ಆರೋಗ್ಯವಾಗಿದ್ದು, ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಇಂದು ಸಂಜೆ 4 ಗಂಟೆಗೆ ಸುಹಾಸಿನಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.