ಚುನಾವಣೆಗಳಲ್ಲಿ ಜೆಡಿಎಸ್ ಸೋಲಿಗೆ ಸಕ್ಕರೆ ಕಾರ್ಖಾನೆಗಳ ನಿರ್ಲಕ್ಷ್ಯವೇ ಕಾರಣ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ
ಮೈಸೂರು

ಚುನಾವಣೆಗಳಲ್ಲಿ ಜೆಡಿಎಸ್ ಸೋಲಿಗೆ ಸಕ್ಕರೆ ಕಾರ್ಖಾನೆಗಳ ನಿರ್ಲಕ್ಷ್ಯವೇ ಕಾರಣ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ

December 30, 2019

ಕೆ.ಆರ್.ಪೇಟೆ, ಡಿ.29- ರಾಜ್ಯದಲ್ಲಿ ಅಧಿಕಾರ ನಡೆಸಿದ ಜೆಡಿಎಸ್ ಮೈಷುಗರ್ ಹಾಗೂ ಪಿಎಸ್‍ಎಸ್‍ಕೆ ಸಕ್ಕರೆ ಕಾರ್ಖಾನೆ ಗಳನ್ನು ನಿರ್ಲಕ್ಷಿಸಿದ್ದರಿಂದ ಜಿಲ್ಲೆಯ ಮತ ದಾರರು ಲೋಕಸಭೆ, ವಿಧಾನಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅನ್ನು ತಿರಸ್ಕ ರಿಸಿದ್ದಾರೆ ಎಂದು ಮಾಜಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ಪಟ್ಟಣದ ಜಯಮ್ಮ-ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ನಡೆದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಉಪ ಚುನಾವಣೆ ಆತ್ಮಾವಲೋಕನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಗೆಲ್ಲುವ ಭರವಸೆ ಇತ್ತು. ಆದರೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆದ್ದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ತಮ್ಮ ತವರು ಕ್ಷೇತ್ರವನ್ನು ರಾಜ್ಯ ದಲ್ಲೇ ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸು ತ್ತಾರೆ ಎಂದು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ತಾಲೂಕಿನ ಮತದಾರರಿಗೆ ಮನವರಿಕೆ ಮಾಡಿಕೊಟ್ಟ ಕಾರಣ ಮತ ದಾರರು ಬಿಜೆಪಿ ಬೆಂಬಲಿಸಿದ್ದಾರೆ ಎಂದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಇನ್ನಿಲ್ಲದ ಆಶ್ವಾಸನೆ ನೀಡಿ ಮುಖ್ಯ ಮಂತ್ರಿಯಾದ ಹೆಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ಅಭಿವೃದ್ಧಿಗೆ ಯಾವುದೇ ಕೆಲಸ ಮಾಡಲಿಲ್ಲ. ಪರಿಣಾಮ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನು ಭವಿಸಿದರು. ಅಲ್ಲದೇ ಉಪಚುನಾ ವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ತಾಲೂ ಕಿನ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂ ರಪ್ಪನವರು ಜಿಲ್ಲೆಯ ಹಾಗೂ ತಾಲೂಕಿನ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ಬಿಜೆಪಿಗೂ ಜಿಲ್ಲೆಯ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ, ಮುಖಂಡ ಗಣಿಗ ರವಿಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಿದಂಬರ್, ಜಿಪಂ ಮಾಜಿ ಅಧ್ಯಕ್ಷ ಸುರೇಶ್, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಡಾ.ಬಿ.ರಾಜಶೇಖರ್, ತಾಲೂಕು ಅಧ್ಯಕ್ಷೆ ಬಿ.ಸಿ.ಮೀನಾಕ್ಷಿ, ಎಸ್‍ಸಿ ಕಾಂಗ್ರೆಸ್ ಅಧ್ಯಕ್ಷ ರಾಜಯ್ಯ, ಶಿವಣ್ಣ, ಎಐಸಿಸಿ ಸಂಯೋ ಜಕಿ ಶುಭದಾಯಿನಿ, ಕೆಯುಐಡಿಎಫ್‍ಸಿ ನಿಗಮ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಜಿಲ್ಲಾ ಎಸ್‍ಟಿ ಕಾಂಗ್ರೆಸ್ ಅಧ್ಯಕ್ಷ ರಾಜಾನಾಯಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ರವೀಂದ್ರ ಬಾಬು, ಜಿಪಂ ಸದಸ್ಯ ಎಲ್.ದೇವರಾಜು, ಮುಖಂಡ ರಾದ ಎ.ಎಂ.ಸಂಜೀವಪ್ಪ, ಡಾ.ರಾಮ ಕೃಷ್ಣೇಗೌಡ, ಸಿ.ಎಂ.ದ್ಯಾವಪ್ಪ, ತಾಪಂ ಸದಸ್ಯರಾದ ಮಾಧವಪ್ರಸಾದ್, ನಿಂಗೇ ಗೌಡ, ವಿನೂತ, ಪುರಸಭಾ ಸದಸ್ಯರು ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

Translate »