ಜ.11, ಹೆಚ್ಚೆಸ್ಸೆಂ ‘ಒಂದು ನೆನಪು’
ಚಾಮರಾಜನಗರ

ಜ.11, ಹೆಚ್ಚೆಸ್ಸೆಂ ‘ಒಂದು ನೆನಪು’

January 6, 2020

ಚಾಮರಾಜನಗರ, ಜ.5- ಮಾಜಿ ಸಚಿವ ದಿವಂಗತ ಎಚ್. ಎಸ್. ಮಹದೇವ ಪ್ರಸಾದ್ ಅವರ “ಒಂದು ನೆನಪು” ಕಾರ್ಯ ಕ್ರಮವನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜ.11 ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಎಚ್.ಎಚ್.ಮಹದೇವಪ್ರಸಾದ್ ಅವರ ನೆನಪು ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮಹದೇವಪ್ರಸಾದ್ ಅವರು ಜಿಲ್ಲೆಯ ಅಭಿವೃದ್ಧಿ ಹಾಗೂ ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು, ಶ್ರೀಮಹದೇಶ್ವರ ಪ್ರಾಧಿ ಕಾರ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಜ. 11 ರಂದು ನಡೆಯುವ ಕಾರ್ಯಕ್ರಮ ದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಮಹದೇವಪ್ರಸಾದ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿ ಕೊಡುವಂತೆ ಧ್ರುವನಾರಾಯಣ್ ಮನವಿ ಮಾಡಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಮಾಜಿ ಸಚಿವ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸಿ ದ್ದರು. ಅವರಿಗೆ ಗೌರವ ಸೂಚಿಸುವ ಸಲು ವಾಗಿ ಜಿಲ್ಲಾ ಕಾಂಗ್ರೆಸ್ ಅವರ ನೆನಪು ಕಾರ್ಯ ಕ್ರಮವನ್ನು ಹಮ್ಮಿಕೊಂಡಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆ ಯಲ್ಲಿ ಶಾಸಕ ಆರ್.ನರೇಂದ್ರ, ಮಾಜಿ ಶಾಸಕ ಎಸ್.ಜಯಣ್ಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಪಂ ಸದಸ್ಯರಾದ ಕೆ.ಪಿ.ಸದಾಶಿವ ಮೂರ್ತಿ, ಯೋಗೇಶ್, ಕೆರೆಹಳ್ಳಿ ನವೀನ್, ಬಸವರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‍ಕುಮಾರ್, ತಾಪಂ ಮಾಜಿ ಅಧ್ಯಕ್ಷ ಎಚ್.ವಿ.ಚಂದ್ರು, ಕೆಪಿಸಿಸಿ ಸದಸ್ಯ ಸೈಯದ್‍ರಫೀ, ಮುಖಂಡ ರಾದ ಗಣೇಶ್‍ಪ್ರಸಾದ್, ನಂಜುಂಡಪ್ರಸಾದ್, ನಂಜಪ್ಪ, ರಮೇಶ್, ಮುನಿರಾಜು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಮಹ ದೇವು, ಚಿಕ್ಕಮಹದೇವು, ಮಹಮದ್ ಅಸ್ಗರ್, ತಾಪಂ ಸದಸ್ಯ ಕುಮಾರ್‍ನಾಯಕ್, ಮಾಜಿ ಸದಸ್ಯ ರಾಜು, ಪದ್ಮಾಪುರುಷೋ ತ್ತಮ್, ಚಿನ್ನಮ್ಮ, ನಾಗರತ್ನ, ನಾಗಶ್ರೀ, ಭಾಗ್ಯಮ್ಮ ಇತರರು ಭಾಗವಹಿಸಿದ್ದರು.

.

Translate »