ಮಾಜಿ ಸಚಿವ ಜಮೀರ್ ಅಹ್ಮದ್‍ಗೆ ಹೃದಯಾಘಾತ
ಮೈಸೂರು

ಮಾಜಿ ಸಚಿವ ಜಮೀರ್ ಅಹ್ಮದ್‍ಗೆ ಹೃದಯಾಘಾತ

October 21, 2019

ಬೆಂಗಳೂರು, ಅ.20- ಲಘು ಹೃದ ಯಾಘಾತವಾಗಿ ಮಾಜಿ ಸಚಿವ ಚಾಮರಾಜ ಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖ ಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತ ವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ದ್ದಾರೆ. ಮೂಲಗಳ ಪ್ರಕಾರ ಜಮೀರ್ ಅವ ರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಇನ್ನು ಜಮೀರ್ ಅಹ್ಮದ್ ಖಾನ್ ಇತ್ತೀ ಚೆಗೆ ಭಾರಿ ಸುದ್ದಿಗೆ ಗ್ರಾಸವಾಗಿರುವ ಐಎಂಎ ಜ್ಯುವೆಲ್ಸ್ ವಂಚನೆ ಕೇಸ್‍ನಲ್ಲೂ ಅವರ ಹೆಸರು ಕೇಳಿಬಂದಿತ್ತು. ಅಲ್ಲದೆ ಅಧಿಕಾರಿ ಗಳು ಅವರನ್ನು ವಿಚಾರಣೆ ನಡೆಸಿದ್ದರು.

Translate »