ಕೆ.ಆಲದಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ 
ಹಾಸನ

ಕೆ.ಆಲದಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ 

November 29, 2018

ಹಾಸನ: ಸರಳ ಸ್ವಭಾವದ, ನಗು ಮುಖದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಅಂತ್ಯಕ್ರಿಯೆ ತಾಲೂಕಿನ ಶಾಂತಿ ಗ್ರಾಮ ಹೋಬಳಿ, ಕೆ.ಆಲದಹಳ್ಳಿಯಲ್ಲಿ ರುವ ತಮ್ಮ ತೋಟದ ಜಾಗದಲ್ಲಿ ಬುಧವಾರ ಸಂಜೆ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಮಂಗಳವಾರ ಬೆಳಿಗ್ಗೆ ನಿಧರಾದ ಮಾಜಿ ಶಾಸಕ ಹೆಚ್.ಎಸ್.ಪ್ರಕಾಶ್ ಪಾರ್ಥಿವ ಶರೀರವನ್ನು ಹಾಸನ ನಗರಕ್ಕೆ ಬಂದಾಗ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿ, ನಂತರ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಟ್ಟು, ಬುಧವಾರ ಮಧ್ಯಾಹ್ನ ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಮಾಜಿ ಶಾಸಕರ ತೋಟದ ಜಮೀನು ಕೆ.ಆಲದಹಳ್ಳಿಗೆ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಕುಂದೂರು ಮಠದ ಶಿವಪುತ್ರನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹಾಗೂ ಸಂಸದ ಹೆಚ್.ಡಿ.ದೇವೇಗೌಡ, ಲೋಕೋಪ ಯೋಗಿ ಇಲಾಖೆ ಸಚಿವ ಎಚ್.ಡಿ. ರೇವಣ್ಣ, ಪತ್ನಿ ಹಾಗೂ ಜಿಪಂ ಸದಸ್ಯೆ ಭವಾನಿ ರೇವಣ್ಣ, ಪುತ್ರ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಕೊನಾರೆಡ್ಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಪಟೇಲ್ ಶಿವರಾಂ, ಜೆಡಿಎಸ್ ಮುಖಂಡ ಕೆ.ಎಂ.ರಾಜೇ ಗೌಡ, ನಗರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸಿ.ಆರ್. ಶಂಕರ್, ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎ.ಎನ್.ಪ್ರಕಾಶ್ ಗೌಡ ಸೇರಿದಂತೆ ಗಣ್ಯರು ಮೃತ ಪ್ರಕಾಶ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಾಜಿ ಶಾಸಕ ಹೆಚ್. ಎಸ್.ಪ್ರಕಾಶ್ ಅವರ ಸಹೋದರ ಹಾಗೂ ಮಾಜಿ ನಗರಸಭಾ ಅಧ್ಯಕ್ಷ ಹೆಚ್.ಎಸ್. ಅನಿಲ್ ಕುಮಾರ್, ಮತ್ತೋರ್ವ ಸಹೋ ದರ ದೇವೇಂದ್ರ ಹಾಗೂ ಮಾಜಿ ಶಾಸಕರ ಪುತ್ರ ಹಾಗೂ ಜಿಪಂ ಸದಸ್ಯ ಸ್ವರೂಪ್, ಮತ್ತೋರ್ವ ಪುತ್ರ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರು ವಿಧಿವಿಧಾನದೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದರು.

ಈ ಸಮಯ ದಲ್ಲಿ ಮೃತದೇಹ ನೋಡುತ್ತಿದ್ದಂತೆ ಏಕಾ ಏಕಿ ಹೆಚ್.ಡಿ.ರೇವಣ್ಣ ಅವರು ಗಳಗಳನೆ ಕಣ್ಣೀರಿಡುತ್ತಲೇ ನಮನ ಸಲ್ಲಿಸಿದರು. ಇಲ್ಲಿಯೂ ಕೂಡ ಜನ ಸಾಗರವೇ ನೆರೆದಿತ್ತು. ವಿವಿಧ ರಾಜಕೀಯ ಪಕ್ಷದ ನಾಯಕರು, ಕಾರ್ಯಕರ್ತರು ಅಪಾರ ಅಭಿಮಾನಿಗಳು ಸೇರಿದ್ದರು. ಈ ವೇಳೆ ನಿಧನರಾದ ಮಾಜಿ ಶಾಸಕರಿಗೆ ಪೊಲೀಸ್ ಇಲಾಖೆಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿ ಸುವ ಮೂಲಕ ಗೌರವ ಸೂಚಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಎಸ್.ಪ್ರಕಾಶ್‍ರವರು ಒಳ್ಳೆಯ ರಾಜಕಾರಣಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಇಂದು ನಮ್ಮ ಜೊತೆ ಅವರು ಇಲ್ಲ. 25 ವರ್ಷದ ಗೆಳೆಯನನ್ನು ಕಳೆದುಕೊಂಡಿರುವುದಾಗಿ ಹೇಳಿದರು. ಮೊದಲು ಆತನ ಲಿವರ್ ಕಸಿ ಸಹೋದರನಿಂದಲೇ ಮಾಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ನಾನು ಕರೆದಿದ್ದೆ. ಆತ ಬಾರದೇ ಬೆಂಗಳೂರಿನಲ್ಲಿಯೇ ಚಿಕಿತ್ಸೆ ಪಡೆಯುವುದಾಗಿ ಹೇಳಲಾಗಿತ್ತು. ಇನ್ನು ಹತ್ತು ವರ್ಷ ಬದುಕುವ ವಿಶ್ವಾಸ ನಮ್ಮಲ್ಲಿ ಇತ್ತು. ಆದರೇ ನಾಲ್ಕು ವರ್ಷದಲ್ಲಿಯೇ ನಿಧನರಾಗಿದ್ದಾರೆ ಎಂದು ಇದೇ ವೇಳೆ ದುಃಖದಿಂದ ಹೇಳಿಕೊಂಡರು.

ಅಗಲಿದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀರಂಗ ವಿದ್ಯಾಸಂಸ್ಥೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಹೆಚ್.ಕೆ.ಕುಮಾರಸ್ವಾಮಿ, ಸಿ.ಎನ್.ಬಾಲಕೃಷ್ಣ, ಎ.ಟಿ. ರಾಮಸ್ವಾಮಿ, ಲಿಂಗೇಶ್, ಸಣ್ಣ ನೀರಾವರಿ ಸಚಿವ ಪುಟ್ಟ ರಾಜು, ವಿಶ್ವನಾಥ್, ಸಾ.ರಾ.ಮಹೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಪಟೇಲ್ ಶಿವರಾಂ, ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಯೋಗಾ ರಮೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಪೊಲೀಸ್ ಅಧಿಕಾರಿ ಐಜಿ ಶರತ್‍ಚಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‍ಗೌಡ, ರಂಗಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ್, ಸತ್ಯಮಂಗಲ ಗ್ರಾಪಂ ಅಧ್ಯಕ್ಷೆ ಹೇಮಾ ಮೋಹನ್‍ಕುಮಾರ್, ಜೆಡಿಎಸ್ ಮುಖಂಡರು ಕೆ.ಎಂ.ರಾಜೇ ಗೌಡ, ನಗರಸಭೆ ಮಾಜಿ ಅಧ್ಯಕ್ಷ ಚನ್ನ ವೀರಪ್ಪ, ಹೆಚ್.ಡಿ.ಸಿ.ಸಿ ಬ್ಯಾಂಕ್ ಉಪಾ ಧ್ಯಕ್ಷ ಗಿರೀಶ್, ಟೈಮ್ಸ್ ಶಿಕ್ಷಣ ಸಂಸ್ಥೆಯ ಗಂಗಾಧರ್, ಬಿ.ಕೆ.ಮಂಜುನಾಥ್ ಮತ್ತು ಕಸಾಪ ಮಾಜಿ ಅಧ್ಯಕ್ಷ ಹೆಚ್.ಬಿ.ಮದನ್ ಗೌಡ, ಹಿರಿಯ ಪತ್ರಕರ್ತರು ಆರ್.ಪಿ.ವೆಂಕ ಟೇಶ್‍ಮೂರ್ತಿ, ಜಿ.ಆರ್.ಕೆಂಚೇಗೌಡ, ಲೀಲಾವತಿ ಪ್ರಕಾಶ್ ಅಂತಿಮ ದರ್ಶನ ಪಡೆದರು.

ಸಾರ್ವಜನಿಕ ವೀಕ್ಷಣೆ ನಂತರ ತೆರೆದ ವಾಹನದಲ್ಲಿ ನಗರದ ಸಾಲಗಾಮೆ ರಸ್ತೆ ಮೂಲಕ ಮಹಾವೀರ ವೃತ್ತ, ಕಸ್ತೂರಬಾ ರಸ್ತೆ, ಸನ್ಮಾನ್ ಹೋಟೆಲ್, ಹೇಮಾವತಿ ಪ್ರತಿಮೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಮೆರವಣಿಗೆ ಮೂಲಕ ಮೃತರ ದೇಹವನ್ನು ಕೊಂಡೊಯ್ಯಲಾಯಿತು. ಸಂಜೆ ವೇಳೆಗೆ ತಾಲೂಕಿನ ಶಾಂತಿಗ್ರಾಮ ಹೋಬಳಿ, ಕಾರೆಕೆರೆ ಗೇಟ್ ಬಳಿ ಇರುವ ಕೆ.ಆಲದಹಳ್ಳಿಯಲ್ಲಿ ವಿಧಿವಿಧಾನದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿದರು.

Translate »