ಮೈಸೂರು ಜಿಪಂ ಮಾಜಿ ಸದಸ್ಯ ವಿಜಯಕುಮಾರ್ ಮುಡಾ ಅಧ್ಯಕ್ಷ?
ಮೈಸೂರು

ಮೈಸೂರು ಜಿಪಂ ಮಾಜಿ ಸದಸ್ಯ ವಿಜಯಕುಮಾರ್ ಮುಡಾ ಅಧ್ಯಕ್ಷ?

March 7, 2019

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ಲಾ

ಮೈಸೂರು: ಜಾತ್ಯಾತೀತ ಜನತಾ ದಳ ತನ್ನ ಪಾಲಿನ ಸ್ಥಳೀಯ ನಿಗಮ ಮಂಡಳಿಗಳಿಗೆ ನೇಮಕಾತಿ ಆರಂಭಿಸಿದೆ. ಮೈಸೂರು ಪ್ರತಿಷ್ಠಿತ ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷರಾಗಿ ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಎನ್.ವಿಜಯ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಹಾಗೆಯೇ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್ (ಅಬ್ದುಲ್ಲಾ) ಅವರನ್ನು ನೇಮಕ ಮಾಡಲಾಗಿದೆ ಎಂದು ನಂಬಲರ್ಹ ಮೂಲಗಳು ಹೇಳಿವೆ. ಹೆಚ್.ಎನ್.ವಿಜಯಕುಮಾರ್ ಅವರು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ಹರದನಹಳ್ಳಿ ಗ್ರಾಮದವರಾಗಿದ್ದು, ಈ ಹಿಂದೆ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದರು.

ಹಾಲಿ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವರೂ ಆದ ಸಾ.ರಾ.ಮಹೇಶ್ ಅವರ ಆಪ್ತರೂ ಆದ ವಿಜಯಕುಮಾರ್, ಹೆಸರಾಂತ ಉದ್ಯಮಿಯೂ ಹೌದು. ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಾ ಬಂದಿರುವ ವಿಜಯಕುಮಾರ್ ಅವರ ಪಕ್ಷ ನಿಷ್ಠೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಸಂಬಂಧಿಸಿದ ಕಡತಕ್ಕೆ ಅಂಕಿತ ಕೂಡ ಹಾಕಿದ್ದಾರೆ ಎನ್ನಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಆದೇಶ ಹೊರ ಬೀಳುವುದು ಬಾಕಿ ಇದೆ.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಬ್ದುಲ್ ಅಜೀಜ್ ಅವರನ್ನು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿದ್ದು, ಆದೇಶ ಹೊರ ಬೀಳುವುದು ಬಾಕಿ ಇದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಪೂರಕ ಪರಿಸ್ಥಿತಿ ನಿರ್ಮಾಣ ಮಾಡುವ ದೃಷ್ಟಿಯಿಂದ ಈ ನೇಮಕಾತಿಯನ್ನು ಮಾಡಲಾಗಿದೆ ಎಂದು ಹೇಳಲಾಗಿದೆ.

Translate »