ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ಪತ್ರೆ ಭೇಟಿ
ನವದೆಹಲಿ: ಭಾರತದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಬಹು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೈನಂದಿನ ತಪಾಸಣೆಗಾಗಿ ವಾಜಪೇಯಿ ಯವರನ್ನು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಡಾ. ರಣ್‍ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋ ಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ಆಸ್ಪತ್ರೆಗೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಉಪ ಪ್ರಧಾನಿ ಎಲ್.ಕೆ.ಅದ್ವಾಣ , ಸಚಿವರಾದ ರಾಜ ನಾಥ್ ಸಿಂಗ್, ನಿತಿನ್ ಗಡ್ಕರಿ ಇತರರು ಭೇಟಿ ನೀಡಿ, ವಾಜಪೇಯಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. 1998ರಲ್ಲಿ 13 ತಿಂಗಳುಗಳ ಕಾಲ ಅಧಿ ಕಾರ ನಡೆಸಿದ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರ
ಎಐಎಡಿಎಂಕೆ ನೇತಾರೆ ಜೆ.ಜಯಲಲಿತಾ ಅವರು ಬೆಂಬಲ ವಾಪಸ್ ತೆಗೆದು ಕೊಂಡಾಗ ಮತ್ತೆ ಬಿತ್ತು. 4 ದಶಕಗಳ ಕಾಲ ವಿಪಕ್ಷದಲ್ಲಿದ್ದ ಬಿಜೆಪಿ 1996ರಲ್ಲಿ ವಾಜಪೇಯಿ ನೇತೃತ್ವದಲ್ಲಿ ಅಧಿಕಾರಕ್ಕೇರಿತು. ಆದರೆ ಈ ಸರ್ಕಾರ 13 ದಿನಗಳ ಕಾಲವಷ್ಟೇ ಅಧಿಕಾರ ನಡೆಸಿತು. 1999ರಲ್ಲಿ ಮತ್ತೆ ವಾಜಪೇಯಿ ಸರ್ಕಾರ ಅಧಿಕಾರಕ್ಕೇರಿ 5 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿತ್ತು.