ಬೆಂಗಳೂರು ನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ಕೋ.ವೆಂ. ರಾಮಕೃಷ್ಣೇಗೌಡ ನಿಧನ
News

ಬೆಂಗಳೂರು ನಗರ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ಕೋ.ವೆಂ. ರಾಮಕೃಷ್ಣೇಗೌಡ ನಿಧನ

May 4, 2021

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗ ಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೋ.ವೆಂ. ರಾಮಕೃಷ್ಣೇ ಗೌಡ ಅವರು ಕೋವಿಡ್ ಸೋಂಕಿ ನಿಂದಾಗಿ ಇಂದು ಕೊನೆಯುಸಿರೆಳೆ ದರು. ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆ ಒದಗಿಸಲಾಗಿದ್ದರೂ ಅವರು ಬದುಕುಳಿಯಲಿಲ್ಲ.

ಕನ್ನಡ ಪ್ರಾಧ್ಯಾಪಕರಾಗಿ, ಸಾಹಿತಿಯಾಗಿ, ಗಾಯಕರಾಗಿ, ಕನ್ನಡ ಸಂಸ್ಕೃತಿ ಚಿಂತಕರಾಗಿ ನಿರಂತರ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡಿದ್ದ ಅವರು ಕನ್ನಡಪರ ಹೋರಾಟಗಾರರಾಗಿಯೂ ತೊಡಗಿಸಿಕೊಂಡಿದ್ದರು. ಅವರು 16 ವ್ಯಕ್ತಿಚಿತ್ರಗಳನ್ನಷ್ಟೇ ಅಲ್ಲದೆ 40ಕ್ಕೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲದೆ, ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

ಅಗಲಿದ ಕೋ.ವೆಂ. ರಾಮಕೃಷ್ಣೇಗೌಡ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಸಂಸ್ಕೃತಿ ಚಿಂತಕರಲ್ಲಿ ಪ್ರಮುಖ ರಾಗಿ ಗುರುತಿಸಿಕೊಂಡಿದ್ದ ಕೋ.ವೆಂ. ಅವರು ಕರೊನಾಗೆ ಬಲಿಯಾಗಿರುವುದು ನಿಜಕ್ಕೂ ದುರದೃಷ್ಟಕರ. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಮತ್ತೊಂದು ಕ್ರಿಯಾಶೀಲ ಚೇತನವೊಂದನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ದಯಪಾಲಿಸಲಿ ಎಂದು ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.

Translate »