ಬೆಂಗಳೂರು, ಮೇ 18(ಕೆಎಂಶಿ)-ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರಮೋದಿ, ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಸೇರಿದಂತೆ ಅನೇಕ ಗಣ್ಯರು ಜನ್ಮದಿನದ ಶುಭಾಶಯ ಕೋರಿ ದ್ದಾರೆ. 88ನೇ ವರ್ಷಕ್ಕೆ ಕಾಲಿಟ್ಟಿರುವ ಗೌಡರು ತಮ್ಮ ಹುಟ್ಟು ಹಬ್ಬ ವನ್ನು ಸರಳವಾಗಿ ಆಚರಿಸಿಕೊಂಡರು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಯಾವುದೇ ಅಭಿಮಾನಿಗಳು ತಮ್ಮ ಹುಟ್ಟು ಹಬ್ಬ ವನ್ನು ಆಚರಿಸದಂತೆ ಕರೆ ನೀಡಿದ್ದಲ್ಲದೆ, ತಮ್ಮ ನಿವಾಸಕ್ಕೂ ಯಾರನ್ನು ಬರಬಾರದೆಂದು ಮನವಿ ಮಾಡಿಕೊಂಡಿದ್ದರು. ಪ್ರಧಾನಿ ಅಲ್ಲದೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಅಶ್ವತ್ಥ್‍ನಾರಾಯಣ್ ಸಹ ಹೆಚ್.ಡಿ.ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ.