ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆ
ಮೈಸೂರು

ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆ

March 26, 2019

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಇಂದು ಮಧ್ಯಾಹ್ನ ಇಲ್ಲಿನ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಿಗ್ಗೆ ಹೊಳೆನರಸೀ ಪುರದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ ಮತ್ತು ಮಾವಿನಕೆರೆ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾ ಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತುಮಕೂರಿಗೆ ಮಧ್ಯಾಹ್ನ ಆಗಮಿಸಿ ದರು. ಇಲ್ಲಿನ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೂನಿಯರ್ ಕಾಲೇಜು ಮೈದಾನದಿಂದ ಅಪಾರ ಸಂಖ್ಯೆಯ ಅಭಿಮಾನಿ ಗಳು, ಕಾರ್ಯಕರ್ತರೊಂದಿಗೆ ಮೆರವಣಿಗೆ ಹೊರಟರು.

ಶುಭ ಮುಹೂರ್ತ ಮೀರುತ್ತಿದ್ದ ಕಾರಣ ಮೆರವಣಿಗೆ ಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ಜಿಲ್ಲಾಧಿಕಾರಿ ಗಳ ಕಚೇರಿಗೆ ತೆರಳಿ ಗೌಡರು ನಾಮಪತ್ರ ಸಲ್ಲಿಸಿದರು. ಆ ವೇಳೆಗಾಗಲೇ ಅವರ ಪತ್ನಿ ಚೆನ್ನಮ್ಮ ಅವರು ಡಿಸಿ ಕಚೇರಿಗೆ ಆಗಮಿಸಿದ್ದರು. ನಾಮಪತ್ರ ಸಲ್ಲಿಕೆ ವೇಳೆ ಗೌಡರಿಗೆ ಪತ್ನಿ ಚೆನ್ನಮ್ಮ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಶ್ರೀನಿವಾಸ್, ಮಾಜಿ ಸಚಿವ ಟಿ.ಬಿ. ಜಯ ಚಂದ್ರ ಸಾಥ್ ನೀಡಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು 29 ವರ್ಷ ಕಾಲ ಸಂಸದನಾಗಿ ಸೇವೆ ಸಲ್ಲಿಸಿದ್ದೇನೆ. ಅದರಲ್ಲಿ 11 ತಿಂಗಳು ಪ್ರಧಾನಮಂತ್ರಿಯಾಗಿದ್ದೆ. ಹಾಗಾಗಿ ಚುನಾವಣೆಯಲ್ಲಿ ನಿಲ್ಲುವುದಿಲ್ಲ ಎಂದು ಘೋಷಿಸಿದ್ದೆ. ಹಾಸನ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಪ್ರಜ್ವಲ್‍ಗೆ ತಿಳಿಸಿದ್ದೆ ಎಂದು ಹೇಳಿದರು. ಆದರೆ, ನಾನು ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕೆಂದು ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಗುಲಾಂ ನಬಿ ಆಜಾದ್ ಸೇರಿದಂತೆ ಅನೇಕ ರಾಷ್ಟ್ರೀಯ ಮುಖಂಡರು ಸಲಹೆ ನೀಡಿದ್ದರು. ಹಲವಾರು ರಾಜ್ಯ ಮುಖಂಡರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಒತ್ತಡ ಹೇರಿದರು. ಅದರಿಂದಾಗಿ ಮೈತ್ರಿ ನಿಯಮದಂತೆ ಜೆಡಿಎಸ್ ಪಾಲಿಗೆ ಬಂದ ತುಮಕೂರಿನಿಂದ ಸ್ಪರ್ಧಿಸಿದ್ದೇನೆ ಎಂದು ಹೇಳಿದರು. ಸಂಸದ ಮುದ್ದಹನುಮೇಗೌಡರು ಬಂಡಾಯವಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ತುಮಕೂರಿನ ಜನ ನನ್ನನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Translate »