ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖ ಲಿಸಿದ್ದು, ತಜ್ಞವೈದ್ಯರ ತಂಡವು ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ.

ಭಾರತದ ಆರ್ಥಿಕತೆಯ ಸುಧಾರಣಾ ಶಿಲ್ಪಿ ಎಂದು ಪ್ರಸಿದ್ಧಿ ಪಡೆದಿರುವ ಡಾ. ಮನಮೋಹನ್‍ಸಿಂಗ್ ದೇಶ ಕಂಡ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದಾರೆ. ಪಿ.ವಿ. ನರಸಿಂಹರಾವ್ ಸರ್ಕಾರದ ಅವಧಿ ಯಲ್ಲಿ ವಿತ್ತ ಸಚಿವರಾಗಿ ಮನಮೋಹನ್ ಸಿಂಗ್ ಸೇವೆ ಸಲ್ಲಿಸಿದ್ದರು. ಬಳಿಕ ಮೇ 22ರ 2004ರಲ್ಲಿ ಕಾಂಗ್ರೆಸ್ ಸರ್ಕಾರವು ಅಸ್ತಿತ್ವಕ್ಕೆ ಬಂದಾಗ ದೇಶದ ಪ್ರಧಾನಿ ಯಾಗಿ ಮನಮೋಹನ್‍ಸಿಂಗ್ ಆಯ್ಕೆ ಯಾದರು. ಅಲ್ಲಿಂದ 10 ವರ್ಷಗಳ ಕಾಲ ಅಂದರೆ ಮೇ 26, 2014 ರವರೆಗೂ ಭಾರತದ ಪ್ರಧಾನಿಯಾಗಿ ಮನ ಮೋಹನ್‍ಸಿಂಗ್ ಸೇವೆ ಸಲ್ಲಿಸಿದ್ದಾರೆ.