ಮೈಸೂರಲ್ಲಿ ನಾಲ್ಕು ಪ್ರತ್ಯೇಕ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ನಾಲ್ಕು ಪ್ರತ್ಯೇಕ ಪ್ರತಿಭಟನೆ

February 12, 2019

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈಸೂರು ನಗರದಲ್ಲಿ ಸೋಮವಾರ ಬೆಳಿಗ್ಗೆ ನಾಲ್ಕು ಪ್ರತ್ಯೇಕ ಪ್ರತಿಭಟನೆಗಳು ನಡೆದವು.

ಮಹಾನಗರ ಪಾಲಿಕೆ ಎದುರು ಕರ್ನಾ ಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಎದುರು ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮಸ್ಥರು ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವ ದಲ್ಲಿ ಕರಡಿಲಕ್ಕನಕೆರೆ ಏತ ನೀರಾವರಿ ಯೋಜ ನೆಯ ಭೂಸ್ವಾದೀನದಲ್ಲಿ ಭೂಮಿ ಕಳೆದುಕೊಂಡ ರೈತರು ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಕರವೇ: ಎನ್‍ಆರ್ ಮೊಹಲ್ಲಾದ ಶಿವಾಜಿ ರಸ್ತೆಯ ಬೀದಿಬದಿ ವ್ಯಾಪಾರಿ ಗಳನ್ನು ಯಾವುದೇ ಮಾಹಿತಿ ನೀಡದೆ ತೆರವುಗೊಳಿಸಲಾಗಿದೆ ಎಂದು ಆರೋ ಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಾಜಿ ರಸ್ತೆಯ ಬದಿಯಲ್ಲಿ ಹಲವು ವರ್ಷಗಳಿಂದ ನೂರಾರು ವ್ಯಾಪಾರಿಗಳು ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ತೆರವುಗೊಳಿಸಲಾಗಿದೆ. ಅಲ್ಲದೇ ಮೈಸೂರಿನ ಯಾವುದೇ ಬಡಾ ವಣೆಯಲ್ಲಿ ಈ ರೀತಿಯಲ್ಲಿ ತೆರವು ಮಾಡಿಲ್ಲ. ಪಾಲಿಕೆಯ ಈ ಕ್ರಮದಿಂದ ಬಡ ವ್ಯಾಪಾ ರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವ್ಯಾಪಾರಕ್ಕೆ ಸೂಕ್ತ ಜಾಗ ಕಲ್ಪಿಸದೇ ಏಕಾ ಏಕಿ ತೆರವುಗೊಳಿಸಿರುವುದು ಖಂಡ ನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಮೈಸೂರು ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಕಾರ್ಯಕರ್ತರಾದ ಹೇಮಂತ್, ಲೋಕೇಶ್, ಸುನಂದ್, ರಫೀಕ್ ಅಸ್ಲಂ, ಅಫ್ರೋಜ್, ಮಧು, ಹೇಮ, ರತ್ನಮ್ಮ, ಜಾನಕಿ ಸೇರಿದಂತೆ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಂಗನವಾಡಿ ಕಾರ್ಯಕರ್ತೆಯರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ 18 ಸಾವಿರ ರೂ. ವೇತನ ನೀಡುವುದು ಸೇರಿ ದಂತೆ ವಿವಿಧ ಬೇಡಿಕೆಗಳನ್ನು ಈಡೇರಿ ಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‍ನ ಮೈಸೂರು ಜಿಲ್ಲಾ ಘಟಕದ (ಎಐಟಿ ಯುಸಿ ಸಂಯೋಜಿತ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಕಾರ್ಯಾಲ ಯದ ಎದುರು ಜಮಾಯಿಸಿದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, 2011ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವಧನ ಹೆಚ್ಚಳ ಮಾಡಿದನ್ನು ಬಿಟ್ಟರೆ ನಂತರ ಯಾವುದೇ ಸರ್ಕಾರಗಳು ಗೌರವಧನ ಹೆಚ್ಚಳ ಮಾಡಿಲ್ಲ. ಇದೀಗ ಕಾರ್ಯ ಕರ್ತರು ಮಾಸಿಕ 3 ಸಾವಿರ ರೂ. ಹಾಗೂ ಸಹಾಯಕಿಯರು 1,500 ರೂ. ಗೌರವ ಧನದಲ್ಲೇ ದುಡಿಯುತ್ತಿದ್ದಾರೆ. ಅದರಲ್ಲೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ತನ್ನ ನಾಲ್ಕೂವರೆ ವರ್ಷ ಆಡಳಿತದಲ್ಲಿ ಹೆಚ್ಚಳಕ್ಕೆ ಮುಂದಾಗಲೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಅಂಗನ ವಾಡಿ ಮಹಿಳೆಯರಿಗೆ ಶೇ.50ರಷ್ಟು ಗೌರವ ಧನದಲ್ಲಿ ಹೆಚ್ಚಳವೆಂದು ಘೋಷಿ ಸಲಾಗಿದೆ. ಆದರೆ ಈ ಬಗ್ಗೆ ಎಲ್ಲೂ ಸ್ಪಷ್ಟತೆ ಇಲ್ಲ. ಕೇವಲ ಘೋಷಣೆಯಾಗಿ ಉಳಿ ಯುವ ಆತಂಕ ಕಾಡುತ್ತಿದೆ. ಜೊತೆಗೆ ಅಸಂಘಟಿತ ಕಾರ್ಮಿಕರಿಗೆ ಮಾಸಿಕ 3 ಸಾವಿರ ರೂ. ಪಿಂಚಣಿ ಘೋಷಿಸಲಾಗಿದೆ. ಆದರೆ ಅಂಗನವಾಡಿ ಮಹಿಳೆಯರಿಗೆ ಈ ಸೌಲಭ್ಯ ಘೋಷಿಸಿಲ್ಲ ಎಂದು ಕಿಡಿಕಾರಿದರು.

ಹಾಲಿ ಸೇವೆಯನ್ನು ಖಾಯಂ ಎಂದು ಪರಿಗಣಿಸಿ ನಿವೃತ್ತಿ ಬಳಿಕ ಮಾಸಿಕ 3 ಸಾವಿರ ರೂ. ಪಿಂಚಣಿ ನೀಡಬೇಕು. ಇಎಸ್‍ಐ ಮತ್ತು ಪಿಎಫ್ ಸೌಲಭ್ಯ ಕಲ್ಪಿಸಬೇಕು. ಕರ್ತವ್ಯದ ವೇಳೆ ಗ್ಯಾಸ್ ಸ್ಟವ್ ಅವಘಡದಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಮೈಸೂರು ಗ್ರಾಮಾಂತರ ಪ್ರದೇಶಗಳಲ್ಲಿ ಮೂರು ತಿಂಗಳಿಂದ ಗೌರವ ಧನ ನೀಡಿಲ್ಲ. ಕೂಡಲೇ ಪಾವತಿಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಜೆಕೆ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಹೊರಟು ನಾರಾಯಣಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಎದುರು ತಲುಪಿದರು. ಸಂಘಟನೆಯ ರಾಜ್ಯ ಮಂಡಲಿ ಸದಸ್ಯ ಡಿ.ಜಗನ್ನಾಥ್, ತಿ.ನರಸೀಪುರ ತಾಲೂಕು ಅಧ್ಯಕ್ಷೆ ಪಿ.ಎಂ.ಸರೋಜ, ಮೈಸೂರು ತಾಲೂಕು ಅಧ್ಯಕ್ಷೆ ಭ್ರಮರಾಂಬಿಕಾ, ಪ್ರಧಾನ ಕಾರ್ಯದರ್ಶಿ ವೈ.ಮಹಾ ದೇವಮ್ಮ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಮಂದಿ ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

ಮದ್ಯದಂಗಡಿಗೆ ರೈತ ಸಂಘ ವಿರೋಧ: ನಂಜನಗೂಡು ತಾಲೂಕು ಹುಣಸನಾಳು ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ನೀಡಿರುವ ರಹದಾರಿ ರದ್ದುಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವ ದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಕೂಡ್ಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಹುಣಸನಾಳು ಗ್ರಾಮದಲ್ಲಿ ಮದ್ಯ ದಂಗಡಿ ತೆರೆಯಲು ನೀಡಿರುವ ರಹದಾರಿ ಯನ್ನು ರದ್ದುಪಡಿಸುವಂತೆ ಅಧಿಕಾರಿ ಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನ ವಾಗಿಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಗ್ರಾಮದಲ್ಲಿ ಮದ್ಯದಂಗಡಿ ಇಲ್ಲವಾಗಿದ್ದು, ಇದೀಗ ಬಂಡವಾಳಶಾಹಿಗಳು ಮದ್ಯ ದಂಗಡಿ ತೆರೆಯಲು ಮುಂದಾಗಿದ್ದು, ಇದಕ್ಕೆ ಅಧಿಕಾರಿ ವರ್ಗ ರಹದಾರಿ ನೀಡಿದೆ. ಈ ಕೂಡಲೇ ರಹದಾರಿ ರದ್ದುಪಡಿಸ ಬೇಕು ಎಂದು ಆಗ್ರಹಿಸಿದರು. ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ಮುಖಂಡರಾದ ಅಶ್ವತ್‍ನಾರಾಯಣ ರಾಜೇ ಅರಸ್, ಲೋಕೇಶ್ ರಾಜೇ ಅರಸ್, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ನಂಜನಗೂಡು ತಾಲೂಕು ಅಧ್ಯಕ್ಷ ನಂಜುಂಡಸ್ವಾಮಿ ಸೇರಿದಂತೆ ಗ್ರಾಮ ಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸ್ವಾದೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡಲು ಆಗ್ರಹ
ಕರಡಿಲಕ್ಕನಕೆರೆ ಏತ ನೀರಾವರಿ ಯೋಜನೆಗೆ ರೈತರ ಭೂಮಿ ಯನ್ನು ಸ್ವಾದೀನಪಡಿಸಿಕೊಂಡಿದ್ದ ನೀರಾವರಿ ಇಲಾಖೆ 10 ವರ್ಷಗಳು ಕಳೆದಿದ್ದರೂ ಪರಿಹಾರ ನೀಡಿಲ್ಲ ಎಂದು ಆರೋ ಪಿಸಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ 2008ರಲ್ಲಿ ಕರಡಿಲಕ್ಕನಕೆರೆ ಏತ ನೀರಾವರಿ ಯೋಜನೆಗಾಗಿ ರೈತರ ಕೃಷಿ ಭೂಮಿ ಸ್ವಾದೀನಪಡಿಸಿ ಕೊಂಡಿದೆ. ಆದರೆ ಈವರೆಗೂ ಯಾವುದೇ ಪರಿಹಾರ ನೀಡಿಲ್ಲ.

ಸದರಿ ಯೋಜನೆಗಾಗಿ ಪಿರಿಯಾಪಟ್ಟಣ ತಾಲೂಕಿನ ಕೊತ್ತ ವಳ್ಳಿ ಗ್ರಾಮದ ಸುಮಾರು 80 ರೈತರ ಕೃಷಿ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರ ನೀಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡು 15 ದಿನದಲ್ಲಿ ರೈತರಿಗೆ ಪರಿಹಾರ ಕೊಡಿಸುವಂತೆ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಮನವಿ ಸ್ವೀಕರಿಸಿದರಲ್ಲದೆ, ನಾಳೆಯೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಿ ಶೀಘ್ರವಾಗಿ ರೈತರಿಗೆ ಪರಿಹಾರ ದೊರಕಿಸಿಕೊಡಲಾ ಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಯಿತು. ರೈತ ಮುಖಂಡರಾದ ಅತ್ತಳ್ಳಿ ದೇವರಾಜ್, ಆರ್.ಕೃಷ್ಣೆಗೌಡ, ಲಕ್ಷ್ಮಣಗೌಡ, ಶಿವಲಿಂಗಪ್ಪ, ಕೆ.ಆರ್.ರವೀಂದ್ರ, ಮಂಜುನಾಥ್, ಬರಡನಪುರ ನಾಗರಾಜ್ ಸೇರಿದಂತೆ ಭೂಮಿ ಕಳೆದು ಕೊಂಡ ರೈತರಾದ ಸುರೇಶ್, ಶಿವಪ್ರಸಾದ್, ಈಶ್ವರಪ್ಪ, ಶಿವಣ್ಣೇಗೌಡ, ಸೈಯದ್ ಅಹಮದ್, ಕೃಷ್ಣಾಷಚಾರಿ ಮತ್ತಿತರರು ಪಾಲ್ಗೊಂಡಿದ್ದರು.

Translate »