ನ್ಯಾಯಬೆಲೆ ಅಂಗಡಿಯಲ್ಲಿ ವಂಚನೆ: ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ
ಮೈಸೂರು

ನ್ಯಾಯಬೆಲೆ ಅಂಗಡಿಯಲ್ಲಿ ವಂಚನೆ: ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ

April 13, 2020

ಬೆಂಗಳೂರು,ಏ.12-ನ್ಯಾಯಬೆಲೆ ಅಂಗಡಿ ಗಳಲ್ಲಿ ವಂಚನೆ ಪ್ರಕರಣಗಳ ದೂರುಗಳು ಕೇಳಿಬರುತ್ತಿದ್ದು, ಸರ್ಕಾರ ಕ್ರಮಕ್ಕೆ ಮುಂದಾ ಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿ ದ್ದಾರೆ. ರಾಜ್ಯದ ಪಡಿತರ ಅಂಗಡಿಗಳಲ್ಲಿ ಗೋಧಿ ಮತ್ತು ಸೀಮೆಎಣ್ಣೆ ನೀಡದೆ ಇದ್ದರೂ ಅವುಗಳನ್ನು ನೀಡಲಾಗಿದೆ ಎಂದು ಪಾವತಿ ರಶೀದಿಯಲ್ಲಿ ನಮೂದಿಸಿ ಬಳಕೆದಾರರಿಂದ ಸಹಿ ಹಾಕಿಸಿಕೊಳ್ಳುತ್ತಿರುವ ವಂಚನೆ ಪ್ರಕ ರಣಗಳ ಬಗ್ಗೆ ದೂರು ಗಳು ಬರುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿ ತಕ್ಷಣ ಗಮನಹರಿಸಿ ಕ್ರಮಕ್ಕೆ ಮುಂದಾಗ ಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಬಡವರಿಗೆ ತೊಂದರೆ ಯಾಗಬಾರದು ಎಂದು 2 ತಿಂಗಳ ಪಡಿತರ ವನ್ನು ಒಟ್ಟಿಗೆ ನೀಡಲು ಸರ್ಕಾರ ನಿರ್ಧರಿ ಸಿದೆ. ಈ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೂ ಸೂಚನೆ ನೀಡಲಾಗಿದೆ. ಸ್ವತಃ ಆಹಾರ ಸಚಿವ ಕೆ.ಗೋಪಾಲಯ್ಯ ಕೆಲವು ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ದ್ದಾರೆ. ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಕೆಲವು ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ.

Translate »