ಮೈಸೂರು, ಜೂ.23 (ಎಂಟಿವೈ) – ಕೊರೊನಾಗೆ ಸೆಡ್ಡು ಹೊಡೆದು, ವಿದ್ಯಾರ್ಥಿಗಳಲ್ಲಿ ಧನಾತ್ಮಕ ಭಾವ ತುಂಬಿ ಪರೀಕ್ಷೆ ಎದುರಿಸಲು ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದ್ಡು, ಮೈಸೂರಿನ 48 ಕೇಂದ್ರ ಸೇರಿದಂತೆ ಜಿಲ್ಲೆಯ 139 ಪರೀಕ್ಷಾ ಕೇಂದ್ರಗಳಲ್ಲೂ ಸ್ಯಾನಿಟೈಸ್ ಪ್ರಕ್ರಿಯೆ ಪೂರ್ಣಗೊಂಡಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಕೆಎಸ್‍ಆರ್‍ಟಿಸಿಯ 54 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ ಪ್ರಯಾಣ ಉಚಿತ.
ತಜ್ಞ ವೈದ್ಯರು, ಆರೋಗ್ಯ ಇಲಾಖೆ ಅಧಿ ಕಾರಿಗಳ ಸೂಚನೆ ಮೇರೆಗೆ ಮೈಸೂರು ನಗರದ 48 ಪರೀಕ್ಷಾ ಕೇಂದ್ರ ಒಳಗೊಂ ಡಂತೆ ಜಿಲ್ಲೆಯಲ್ಲಿ ಒಟ್ಟು 139 ಪರೀಕ್ಷಾ ಕೇಂದ್ರಗಳಿದ್ದು, ಎಲ್ಲಾ ಪರೀಕ್ಷಾ ಕೊಠಡಿ ಗಳಿಗೆ ಮಂಗಳವಾರ ವೈರಾಣು ನಾಶಕ ರಾಸಾಯನಿಕ ಸಿಂಪಡಿಸಲಾಯಿತು. ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಪರೀಕ್ಷಾ ಕೇಂದ್ರ ಪ್ರವೇಶಿಸಲು ಅನು ಕೂಲವಾಗುವಂತೆ ಬಾಕ್ಸ್/ವೃತ್ತಾಕಾರ ಗುರುತು ಮಾಡಲಾಯಿತು. ಸಿದ್ಧತಾ ಕಾರ್ಯ ಇಡೀ ದಿನ ನಡೆಯಿತು.
ವಿದ್ಯಾರ್ಥಿಗಳು: ಜಿಲ್ಲೆಯಲ್ಲಿ 39,822 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಮೈಸೂರಲ್ಲಿ ಓದು ತ್ತಿದ್ದ ವಿವಿಧ ಜಿಲ್ಲೆಗಳ ಹಲವು ವಿದ್ಯಾರ್ಥಿ ಗಳು ಲಾಕ್‍ಡೌನ್‍ನಿಂದಾಗಿ ತವರು ಜಿಲ್ಲೆಗೆ ತೆರಳಿದ್ದಾರೆ. ಮೈಸೂರಿನ 851 ವಿದ್ಯಾರ್ಥಿ ಗಳು ಹೊರ ಜಿಲ್ಲೆಗಳಲ್ಲಿಯೇ ಪರೀಕ್ಷೆ ಬರೆಯುತ್ತಿದ್ದರೆ, ಹೊರ ಜಿಲ್ಲೆಗಳಿಂದ ಮೈಸೂರಿಗೆ ಬಂದು ಲಾಕ್‍ಡೌನ್ ವೇಳೆ ಇಲ್ಲೇ ಉಳಿಯಬೇಕಾಗಿ ಬಂದಿದ್ದ 338 ವಿದ್ಯಾರ್ಥಿಗಳು ಮೈಸೂರಿನಲ್ಲಿಯೇ ಪರೀಕ್ಷೆ ಬರೆಯಲಿದ್ದಾರೆ.
ವೈದ್ಯಕೀಯ ತಂಡ: ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆಗೆ ವೈದ್ಯರು, ಥರ್ಮಲ್ ಸ್ಕ್ರೀನಿಂಗ್ ತಂಡ ಸಜ್ಜುಗೊಳಿಸಲಾಗಿದೆ. ತಪಾಸಣೆ ವೇಳೆ ಯಾರ ಆರೋಗ್ಯ ದಲ್ಲಾದರೂ ಏರುಪೇರು ಕಂಡರೆ ತಕ್ಷಣ ವೈದ್ಯರ ತಂಡ ನೆರವಿಗೆ ಧಾವಿಸಲಿದೆ. 139 ಪರೀಕ್ಷಾ ಕೇಂದ್ರಗಳಲ್ಲಿ (12 ಹೆಚ್ಚುವರಿ ಬ್ಲಾಕ್) ಹಾಗೂ ಪ್ರತಿ ಕೇಂದ್ರದಲ್ಲೂ ಕೊರೊನಾ ಸೋಂಕು ಲಕ್ಷಣವಿರುವ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕೊಠಡಿ ಕಾಯ್ದಿರಿಸಿರುವುದರಿಂದ ವಿದ್ಯಾರ್ಥಿಗಳು, ಪೋಷಕರು ಆತಂಕಪಡಬೇಕಿಲ್ಲ. ಸೀಲ್ ಡೌನ್, ಕಂಟೈನ್ಮೆಂಟ್ ಜೋನ್‍ನಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿ ಗಳಿಗೂ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 7.30ಕ್ಕೆ ಪ್ರವೇಶ: ಪರೀಕ್ಷೆ ನಿತ್ಯ ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಈ ಹಿಂದೆ ಪರೀಕ್ಷೆ ಆರಂಭಕ್ಕೂ 30 ನಿಮಿಷ ಮೊದಲು ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿತ್ತು.
ಈ ಬಾರಿ ಕೊರೊನಾ ಹಿನ್ನೆಲೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಬೆಳಗ್ಗೆ 7.30ರಿಂದಲೇ ಪರೀಕ್ಷಾ ಕೇಂದ್ರದ ಆವರಣ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ತ್ವರಿತಗತಿಯಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲು ಸಹಕಾರಿಯಾಗಲಿದೆ.
ಸಿಸಿ ಕ್ಯಾಮರಾ: ಜಿಲ್ಲೆಯ 139 ಪರೀಕ್ಷಾ ಕೇಂದ್ರದಲ್ಲೂ ಸಿಸಿ ಕ್ಯಾಮರಾ ಅಳವಡಿಸ ಲಾಗಿದೆ. ಪರೀಕ್ಷಾ ಅಕ್ರಮ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಿಟ್ಟಿಂಗ್ ಸ್ಕ್ವಾಡ್, ಫೈಯಿಂಗ್ ಸ್ಕ್ವಾಡ್ ತಂಡ ರಚಿಸ ಲಾಗಿದೆ. ಒಟ್ಟು 2700 ಮಂದಿ ಪರೀಕ್ಷಾ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.