ನಾಳೆಯಿಂದ ಸುಯೋಗ್ ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗೆ ಉಚಿತ ಸಲಹೆ, ಸಮಾಲೋಚನೆ
ಮೈಸೂರು

ನಾಳೆಯಿಂದ ಸುಯೋಗ್ ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗೆ ಉಚಿತ ಸಲಹೆ, ಸಮಾಲೋಚನೆ

December 2, 2018

ಮೈಸೂರು: ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ಡಿಸೆಂಬರ್ 3ರಿಂದ 20ರವರೆಗೆ ಎಲ್ಲಾ ಕಾಯಿಲೆಗಳಿಗೂ ಸಂಬಂಧಿಸಿ ದಂತೆ ತಜ್ಞ ವೈದ್ಯರಿಂದ ಉಚಿತ ಸಮಾಲೋಚನೆ ಮತ್ತು ಸಲಹೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.3ರಂದು ಬೆಳಿಗ್ಗೆ 11ಕ್ಕೆ ಆಸ್ಪತ್ರೆ ಆವರಣ ದಲ್ಲಿ `ಮೈಸೂರು ಮಿತ್ರ’ ಹಾಗೂ `ಸ್ಟಾರ್ ಆಫ್ ಮೈಸೂರ್’ ಪ್ರಧಾನ ಸಂಪಾದಕ ಕೆ.ಬಿ.ಗಣಪತಿ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಎಸ್‍ಜೆಬಿ ಮತ್ತು ಬಿಜಿಎಸ್ ಸಮೂಹ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಶ್ರೀ ಪ್ರಕಾಶನಾಥ ಸ್ವಾಮೀಜಿ ಉಪಸ್ಥಿತರಿರುವರು. ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಮೈಸೂರು ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ವಿ.ರಾಜೀವ್ ಭಾಗವಹಿಸುವರು ಎಂದು ಹೇಳಿದರು.

ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಶಿಬಿರ ನಡೆಯಲಿದ್ದು, 40 ವಿವಿಧ ಕಾಯಿಲೆಗಳ ತಜ್ಞ ವೈದ್ಯರು ಪಾಲ್ಗೊಳ್ಳುವರು. ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳಿಗೆ ವೈದ್ಯರು ಸೂಚಿಸುವ ದೃಢೀಕರಣ ಪರೀಕ್ಷೆ ಸೇರಿದಂತೆ ಮತ್ತಿತರ ಪರೀಕ್ಷೆಗಳಿಗೆ ಶೇ.25ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅಲ್ಲದೆ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುವುದು. ಆಸಕ್ತರು ಹೆಸರು ನೋಂದಣಿಗಾಗಿ ದೂ.ಸಂ. 0821-2533600, 2566966, 9739555908 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ರಾಜೇಂದ್ರ ಪ್ರಸಾದ್, ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್ ಯೋಗಣ್ಣ, ನಿರ್ದೇಶಕಿ ಡಾ.ಯಶಿತಾ ರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »