ಕಷ್ಟವಾದರೂ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ
ಮೈಸೂರು

ಕಷ್ಟವಾದರೂ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಣೆ

May 23, 2020

ಬೆಂಗಳೂರು, ಮೇ 22(ಕೆಎಂಶಿ)- ಕೋವಿಡ್-19ರಿಂದ ಹಣಕಾಸು ತೊಂದರೆ ಯಾದರೂ ಉಚಿತ ಬೈಸಿಕಲ್ ವಿತರಣೆ ಯೋಜನೆ ಸ್ಥಗಿತಗೊಳಿಸದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆ ಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಈ ನಿಟ್ಟಿನಲ್ಲಿ ಶಿಕ್ಷಕರ ಹುದ್ದೆಗಳ ನೇಮ ಕಾತಿ ಪರೀಕ್ಷೆಗಳ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿ ರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮ ಗಳಿಗೆ ತಿದ್ದುಪಡಿ ಮಾಡಲಾಗಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಕೇಂದ್ರ ಸರ್ಕಾರದ ವಿಶೇಷ ನೆರವು ಕೂಡ ಘೋಷಿಸಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಾಗಲಿದೆ ಎಂಬ ಆಶಯ ಸಭೆಯಲ್ಲಿ ವ್ಯಕ್ತವಾಯಿತು. ಕೋವಿಡ್ -19ನಿಂದ ಶಿಕ್ಷಣ ಇಲಾಖೆ ಮೇಲೆ ದೊಡ್ಡ ಪರಿಣಾಮವಾಗಿದ್ದು, ಮುಂದಿನ ದಿನಗಳಲ್ಲಿ ಶಾಲೆಗಳು, ತರಗತಿಗಳನ್ನು ನಡೆಸು ವುದು ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಕೋವಿಡ್ ನಂತರ ತರಗತಿಗಳು, ಶಾಲೆಗಳು ಹೇಗಿರಬೇಕು ಎಂಬ ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಜೂ.25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

 

 

 

Translate »