ಶಿಕ್ಷಕರಿಗೆ ಉಚಿತ ಕೋವಿಡ್ ತಪಾಸಣೆ: ಡಿಡಿಪಿಐ ಸೂಚನೆ
ಮೈಸೂರು

ಶಿಕ್ಷಕರಿಗೆ ಉಚಿತ ಕೋವಿಡ್ ತಪಾಸಣೆ: ಡಿಡಿಪಿಐ ಸೂಚನೆ

September 27, 2020

ಮೈಸೂರು, ಸೆ.26(ಎಸ್‍ಪಿಎನ್)- ಮೈಸೂರು ಜಿಲ್ಲೆಯ ಎಲ್ಲಾ ಶಿಕ್ಷಕರು ಕೋವಿಡ್-19 ಪರೀಕ್ಷೆಯನ್ನು ಉಚಿತವಾಗಿ ಮಾಡಿಸಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡುರಂಗ ಸೂಚಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಮೌಖಿಕ ಆದೇಶದ ಮೇರೆಗೆ ಈ ಸೂಚನೆ ಹೊರಡಿಸಿದ್ದು, ಜಿಲ್ಲೆಯ ಕ್ಷೇತ್ರ ಶಿಕ್ಷಣಾ ಧಿಕಾರಿಗಳು, ತಾಲೂಕಿನ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಕೋವಿಡ್-19 ಪರೀಕ್ಷೆಗೆ ಒಳಪಡಲು ಸಹಕರಿಸಬೇಕು. ಸಮಯಾವಕಾಶ ಪಡೆದು ಸೆ.30ರೊಳಗೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

 

 

 

Translate »