ಬೆಂಗಳೂರು, ಏ.೫- ಎಸ್‌ಸಿ, ಎಸ್‌ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ ೧೫ ಲಕ್ಷ ರೂ. ಸಹಾಯಧನವನ್ನು ೨೦ ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಆಯೋ ಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರ ತದ ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನ್ ರಾಮ್‌ರವರ ೧೧೫ನೇ ಜನ್ಮ ದಿನಾಚರಣೆ ಹಾಗೂ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾ ರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಎಸ್ಸಿ, ಎಸ್ಟಿ ಸಮುದಾಯದವರ ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ ೧,೭೫, ೦೦೦ ರೂ.ಗಳ ಸಹಾಯಧನವನ್ನು ೨ ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾ ನಿಸಲಾಗಿದೆ ಎಂದು ಹೇಳಿದರು.
ಸ್ವಯಂ ಉದ್ಯೋಗ ಯೋಜನೆ: ಸ್ವಯಂ ಉದ್ಯೋಗ ಮಾಡುವ ಎಸ್ಸಿ, ಎಸ್ಟಿ ಸಮು ದಾಯಕ್ಕೆ ಪ್ರತಿ ತಾಲೂಕಿನಲ್ಲಿ ಬಾಬು ಜಗಜೀವನರಾಂ ಸ್ವಯಂ ಉದ್ಯೋಗ ಯೋಜನೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದರು.
೭೫ ಯೂನಿಟ್‌ವರೆಗೆ ಉಚಿತ ವಿದ್ಯುತ್: ಗ್ರಾಮೀಣ ಪ್ರದೇಶದಲ್ಲಿ ಕುಟೀರ ಯೋಜನೆ ಯಡಿ ಎಸ್ಸಿ, ಎಸ್ಟಿ ಸಮುದಾಯದವರಿಗೆ ೭೫ ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ಈ ಸಂಬAಧ ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗು ವುದು ಎಂದು ಸಿಎಂ ತಿಳಿಸಿದರು.
ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ: ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ವಸತಿ ಶಾಲೆ ಗಳಲ್ಲಿ ವಿಶೇಷ ತರಬೇತಿ ನೀಡುವ ವಿನೂ ತನ ಯೋಜನೆಯನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು. ಮುಖ್ಯಮಂತ್ರಿ ಮಾರ್ಗದರ್ಶಿನಿ ವೇದಿಕೆಯ ಮೂಲಕ ೮ರಿಂದ ೧೨ರವರೆಗಿನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗು ವುದು. ಎಸ್ಸಿ, ಎಸ್ಟಿ ಸಮುದಾಯಗಳಿಗಾಗಿ ಸ್ಟಾರ್ಟ್ ಅಪ್ ಯೋಜನೆಯಡಿ ೫೦ ಲಕ್ಷ ರೂ.ಗಳ ಸಹಾಯಧನ ನೀಡುವ ಯೋಜನೆಯನ್ನು ಆಯವ್ಯಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಆಹಾರ ಉತ್ಪಾದನೆಯ ಮೂಲಕ ಹಸಿರು ಕ್ರಾಂತಿ: ಭಾರತ ದೇಶದ ಸಂವಿಧಾನದ ಅನುಷ್ಠಾನದಲ್ಲಿ ಬಾಬು ಜಗಜೀವನ ರಾಂ ಪಾತ್ರ ಮಹತ್ವವಾದದ್ದು. ಪ್ರಾಮಾಣ ಕತೆ, ನಿಷ್ಠೆ, ಬದ್ಧತೆಯ ಮೂರ್ತರೂಪವಾಗಿ ದ್ದರು. ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿ ದಾಗ ಮಾತ್ರ ದೇಶ ಸ್ವಾವಲಂಬನೆ ಯಾಗಲು ಸಾಧ್ಯ ಎಂದು ನಂಬಿದ್ದರು. ಕೃಷಿ ಸಚಿವರಾಗಿ
ಹಸಿರು ಕ್ರಾಂತಿ ಮಾಡುವ ಮೂಲಕ ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಆಹಾರದ ಸ್ವಾವ ಲಂಬನೆಯನ್ನು ತಂದAತಹ ಖ್ಯಾತಿ ಅವರಿಗೆ ಸಲ್ಲುತ್ತದೆ ಎಂದರು. ಶಿಕ್ಷಣ, ಉದ್ಯೋಗ, ಸಾಮಾಜಿಕ ಗೌರವ, ಅವಕಾಶಗಳು ದೊರೆತಾಗ, ಸಮುದಾಯ ಮುಖ್ಯವಾಹಿ ನಿಗೆ ಬಂದಾಗ ಮಾತ್ರ ಭಾರತ ಸಮಗ್ರ ಅಭಿವೃದ್ಧಿಯಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಭೂ ಒಡೆತನ ಹೊಂದಿರುವವರಿಗೆ ಸಾಮಾಜಿಕ ಗೌರವ ದೊರೆಯುತ್ತದೆ. ಸಮುದಾಯದವರ ಭೂ ಒಡೆತನಕ್ಕೆ ಸಂಬAಧಿಸಿದAತೆ ಭೂ ಸುಧಾರಣಾ ಕಾಯ್ದೆ ಜಾರಿ ಮಾಡಲಾಗಿದೆ. ಯೋಜನೆಯ ಯಶಸ್ವಿ ಅನುಷ್ಠಾನದಲ್ಲಿರುವ ತೊಡಕುಗಳನ್ನು ನಿವಾರಿಸಿ ಸಮುದಾಯ ದವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದರು.