ಮೇ, ಜೂನ್ ತಿಂಗಳಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರ ಧಾನ್ಯ
ಮೈಸೂರು

ಮೇ, ಜೂನ್ ತಿಂಗಳಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರ ಧಾನ್ಯ

April 24, 2021

ನವದೆಹಲಿ, ಏ. 23- ಕೊರೊನಾ ವೈರಸ್‍ನ 2ನೇ ಅಲೆ ದೇಶವನ್ನು ಬಾಧಿ ಸುತ್ತಿರುವ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲು ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ. ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಯಲ್ಲಿ ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳಿಗೆ 5 ಕೆ.ಜಿ ಯಷ್ಟು ಆಹಾರ ಧಾನ್ಯಗಳು ಸಿಗ ಲಿದ್ದು, ಒಟ್ಟು 80 ಕೋಟಿ ಫಲಾನುಭವಿಗಳಿಗೆ 2 ತಿಂಗಳ ಕಾಲ ಉಚಿತ ಧಾನ್ಯಗಳು ಲಭ್ಯವಾಗಲಿದೆ. ಕಳೆದ ವರ್ಷ ಕೊರೊನಾ ಲಾಕ್‍ಡೌನ್ ವಿಧಿಸಿದ್ದಾಗ ಪ್ರಧಾನಿ ಮೋದಿ ಬಡವರಿಗೆ ಧಾನ್ಯಗಳನ್ನು ನೀಡುವ ಯೊಜನೆ ಯನ್ನು ಘೋಷಿಸಿದ್ದರು. ಕೊರೊನಾ ಎರಡನೇ ಅವಧಿಯಲ್ಲಿ ಬಡ ಜನತೆಗೆ ಪೌಷ್ಟಿಕ ಆಹಾರಕ್ಕೆ ಪ್ರಧಾನಿ ಮೋದಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಗಾಗಿ ಭಾರತ ಸರ್ಕಾರ 26,000 ಕೋಟಿ ರೂ. ಖರ್ಚು ಮಾಡ ಲಿದೆ ಎಂದು ಅವರು ತಿಳಿಸಿದ್ದಾರೆ.

 

Translate »