ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್‍ನ ಸದಸ್ಯರಿಗೆ ಉಚಿತ ಆರೋಗ್ಯ ಪರೀಕ್ಷೆ
ಮೈಸೂರು

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್‍ನ ಸದಸ್ಯರಿಗೆ ಉಚಿತ ಆರೋಗ್ಯ ಪರೀಕ್ಷೆ

June 8, 2018

ಮೈಸೂರು: ಮೈಸೂರಿನ ಗಾಂಧಿ ವೃತ್ತದಲ್ಲಿರುವ ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್‍ನ ಸದಸ್ಯರಿಗೆ ಜೂ.8ರಿಂದ 10ರವರೆಗೆ ಉಚಿತ ಕಣ್ಣಿನ ತಪಾಸಣೆ, ರಕ್ತದೊತ್ತಡ, ಮಧುಮೇಹ, ಇಸಿಜಿ ಹಾಗೂ ಇಕೋ ಪರೀಕ್ಷೆ ಶಿಬಿರವನ್ನು ಆಯೋಜಿಸಲಾಗಿದೆ.

ಅನ್ನಪೂರ್ಣ ಕಣ ್ಣನ ಆಸ್ಪತ್ರೆ ಸಹಯೋಗದಲ್ಲಿ ಬ್ಯಾಂಕ್‍ನ ಮುಖ್ಯ ಕಚೇರಿ ಆವರಣದಲ್ಲಿ ಜೂ.8ರಂದು ಬೆಳಿಗ್ಗೆ 10ಕ್ಕೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಜೆ.ವಿಕ್ರಮರಾಜೇಅರಸ್ ಅವರು ಶಿಬಿರವನ್ನು ಉದ್ಘಾಟಿಸಲಿದ್ದು, ಬ್ಯಾಂಕ್ ಅಧ್ಯಕ್ಷ ಬಿ.ಕೆ.ಪ್ರಕಾಶ್, ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಯೋಗಣ್ಣ, ಅನ್ನಪೂರ್ಣ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಅಶ್ವಥ್‍ರೈ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಮೂರೂ ದಿನಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಶಿಬಿರದ ಪ್ರಯೋಜನ ಪಡೆಯಬಹುದು.

Translate »