ನ.12ರಿಂದ 17ರವರೆಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ
ಮೈಸೂರು

ನ.12ರಿಂದ 17ರವರೆಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ

November 11, 2018

ಮೈಸೂರು:  ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ನವೆಂಬರ್ 12ರಿಂದ 17ರವರೆಗೆ ಉಚಿತ ಹೃದ್ರೋಗ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್.ಪಿ. ಯೋಗಣ್ಣ ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿದಿನ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ನಡೆಯುವ ಶಿಬಿರದಲ್ಲಿ ನಮ್ಮ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಕೆ.ಎಸ್. ಸದಾನಂದ ಸೇರಿದಂತೆ 7 ಮಂದಿ ಹೃದ್ರೋಗ ತಜ್ಞರು ಭಾಗವಹಿಸಿ, ತಪಾಸಣೆ ನಡೆಸಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ.
ಶಿಬಿರದಲ್ಲಿ ಇಸಿಜಿ, ರಕ್ತ ಗ್ಲೂಕೋಸ್, ರಕ್ತದೊತ್ತಡ ಇನ್ನಿತರೆ ಪರೀಕ್ಷೆ ನಡೆಸಲಾಗು ವುದು. ದೂರವಾಣಿ ಸಂಖ್ಯೆ 0821-2533600, 2566966 ಸಂಪರ್ಕಿಸಿ, ಹೆಸರು ನೋಂದಾಯಿಸಿಕೊಳ್ಳಬಹುದು. ಸುದ್ದಿಗೋಷ್ಠಿಯಲ್ಲಿ ಡಾ.ರಾಜೇಂದ್ರ ಪ್ರಸಾದ್, ಡಾ.ಮಹೇಶ್ ಬಾಬು ಉಪಸ್ಥಿತರಿದ್ದರು.

Translate »