ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರಕ್ಕೆ ಚಾಲನೆ
ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರಕ್ಕೆ ಚಾಲನೆ

July 8, 2018

ಮೈಸೂರು: ನಗರದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ನೇಗಿಲಯೋಗಿ ವಿದ್ಯಾವರ್ಧಕ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾ ಕೇಂದ್ರದ ವತಿಯಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 849 ಕೆಎಸ್‍ಆರ್‍ಪಿ ಮತ್ತು ರಿಸರ್ವ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆಯೋಜಿಸಿದ ಉಚಿತ ತರಬೇತಿ ಕಾರ್ಯಾಗಾರವನ್ನು ಕಾವೇರಿ ನೀರಾವರಿ ನಿಗಮ ನಿಯಮಿತ ಮುಖ್ಯ ಆಡಾಳಿತಾಧಿಕಾರಿ ಡಿ.ರವಿಕುಮಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ವಿವಿಧ ಹುದ್ದೆ ಗಳಿಗೆ ಆಯ್ಕೆ ಮಾಡುತ್ತಿರುವುದು ಪಾರದರ್ಶಕ ಮತ್ತು ಉತ್ತಮ ಆಯ್ಕೆ ವಿಧಾನ ವಾಗಿರುತ್ತದೆ. ಇದರಲ್ಲಿ ಯಾವುದೇ ರೀತಿಯ ಒತ್ತಡ, ಗೊಂದಲವನ್ನು ಇಟ್ಟುಕೊಳ್ಳದೇ ಸೂಕ್ತ ರೀತಿಯ ತಯಾರಿ ನಡೆಸಬೇಕು ಎಂದು ಸಲಹೆ ನೀಡಿದರು. ನೇಗಿಲಯೋಗಿ ಸಂಸ್ಥೆಯ ಕಾರ್ಯಾದರ್ಶಿ ಎನ್.ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಕೃಷ್ಣಕುಮಾರ್, ಸಂಘಟಕ ಶಿವಶಂಕರ್ ಹಾಜರಿದ್ದರು.

Translate »