ಕೆಎಎಸ್ ಅಧಿಕಾರಿ ಸುಧಾ ನಿವಾಸದಿಂದ 3.7 ಕೆಜಿ ಚಿನ್ನ, 10.5 ಕೆಜಿ ಬೆಳ್ಳಿ ವಶ
ಮೈಸೂರು

ಕೆಎಎಸ್ ಅಧಿಕಾರಿ ಸುಧಾ ನಿವಾಸದಿಂದ 3.7 ಕೆಜಿ ಚಿನ್ನ, 10.5 ಕೆಜಿ ಬೆಳ್ಳಿ ವಶ

November 10, 2020

ಎಸಿಬಿ ಐಜಿಪಿ ಚಂದ್ರಶೇಖರ್ ಸ್ಪಷ್ಟನೆ
ಬೆಂಗಳೂರು, ನ.9- ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿಗೊಳಗಾಗಿರುವ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ನಿವಾಸದಿಂದ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿ ವಸ್ತು ಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಎಸಿಬಿ ಐಜಿಪಿ ಚಂದ್ರಶೇಖರ್ ಹೇಳಿದ್ದಾರೆ.

ಇತ್ತೀಚೆಗೆ ಡಾ.ಸುಧಾ ನಿವಾ ಸದ ಮೇಲೆ ಎಸಿಬಿ ದಾಳಿ ಮಾಡಿದ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬೆಂಗಳೂರು, ಉಡುಪಿ, ಮೈಸೂರು ಸೇರಿ ಒಟ್ಟು ಏಳು ಸ್ಥಳಗಳಲ್ಲಿ ದಾಳಿ ಮಾಡ ಲಾಗಿದ್ದು, ಈ ವೇಳೆ 36.89 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದರು.

ಬ್ಯಾಂಕ್ ಖಾತೆಯಲ್ಲಿ 3.5 ಕೋಟಿ ರೂ. ಠೇವಣಿ ಹಾಗೂ 20ಕ್ಕೂ ಹೆಚ್ಚು ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಸ್ಥಿರಾಸ್ತಿ ಕ್ರಯ ಪತ್ರಗಳು, ಜಿಪಿಎ ಕರಾರುಗಳು, ಖರೀದಿ ಒಪ್ಪಂದ ಸೇರಿದಂತೆ 200 ಆಸ್ತಿ ಪತ್ರಗಳು ಪತ್ತೆಯಾಗಿವೆ ಎಂದು ಮಾಹಿತಿ ನೀಡಿದರು. ಇದುವರೆಗೆ ಸುಧಾ ಅವರಿಗೆ ನೋಟಿಸ್ ನೀಡಿಲ್ಲ. ದಾಖಲೆಗಳಿದ್ದರೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಸುಧಾ ಅವರ ಹೊರತಾಗಿ ಅವರ ಸಂಬಂಧಿಗಳ ಮನೆ ಮೇಲೆಯೂ ದಾಳಿ ಮಾಡಲಾಗಿದ್ದು, ದಾಳಿಗೆ ತುತ್ತಾದವರನ್ನು ಬೇನಾಮಿಗಳು ಎಂದು ಪರಿಗಣಿಸಲಾಗಿದೆ. 50 ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದು, 50 ಚೆಕ್ ಲೀಫ್‍ಗಳು ದೊರೆತಿವೆ ಎಂದು ತಿಳಿಸಿದರು.

Translate »