ಮೈಸೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ರಾದ ಅಮಿತ್ ಶಾ ಮಂಗಳವಾರ ಬೆಳಿಗ್ಗೆ ರಾಷ್ಟ್ರಾದ್ಯಂತ ‘ಮೇರಾ ಪರಿವಾರ, ಬಿಜೆಪಿ ಪರಿವಾರ್’ ಕಾರ್ಯಕ್ರಮವನ್ನು ಉದ್ಘಾಟಿ ಸಿದರು. ಬಳಿಕ ಮೈಸೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ನಗರಾಧ್ಯಕ್ಷ ಡಾ. ಬಿ.ಹೆಚ್.ಮಂಜುನಾಥ್ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸಲಾಯಿತು. ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ, ಪಕ್ಷಕ್ಕೆ ಬೆಂಬಲ ಕೋರುವ ನಿಟ್ಟಿನಲ್ಲಿ ಆಯೋಜಿಸಲಾಗುತ್ತಿದೆ. ಈ ಸಂದರ್ಭ ದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಡಾ. ಮಂಜುನಾಥ್, ಗ್ರಾಮಾಂತರ ಅಧ್ಯಕ್ಷ ರಾದ ಕೋಟೆ ಶಿವಣ್ಣ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಚಾಲಕ ರಾದ ಫಣೀಶ್, ರಾಜ್ಯ ಬಿಜೆಪಿ ಕಾರ್ಯ ದರ್ಶಿಗಳಾದ ರಾಜೇಂದ್ರ, ನಗರ ಬಿಜೆಪಿ ಉಪಾಧ್ಯಕ್ಷ ಬಣ್ಣ ರಮೇಶ್, ನಗರ ಪ್ರಧಾನ ಕಾರ್ಯದರ್ಶಿ ಮೈ ಪು ರಾಜೇಶ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.