ಬಿಜೆಪಿಯಿಂದ ದಲಿತರ ದಿಕ್ಕು ತಪ್ಪಿಸುವ ಹುನ್ನಾರ

ಮೈಸೂರು,ನ.6(ಎಂಟಿವೈ)-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ತಿರುಚಿರುವ ಬಿಜೆಪಿಗರು ಸಿದ್ದರಾಮಯ್ಯ ಅವರ ವಿರುದ್ಧ ಪ್ರತಿಭಟನೆ ನಡೆಸಿ ಅಪಪ್ರಚಾರ ಮಾಡುವ ಮೂಲಕ ದಲಿತರನ್ನು ದಿಕ್ಕು ತಪ್ಪಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆರೋಪಿಸಿದ್ದಾರೆ.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿ ಚುನಾವಣೆಯಲ್ಲಿ ಮಾದಿಗ ಜನಾಂಗದ ಸಮ್ಮೇಳನದಲ್ಲಿ ಕೆಲವರು ಅವರ ಸ್ವಾರ್ಥಕ್ಕೆ ಬಿಜೆಪಿ ಸೇರಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದರು. ಆದರೆ ಇದನ್ನು ತಿರುಚಿ ಬಿಜೆಪಿಯವರು ದಲಿತರನ್ನು ದಿಕ್ಕು ತಪ್ಪಿಸುವ ಹುನ್ನಾರ ಮಾಡಿz್ದÁರೆ. ಬಿಜೆಪಿಯವರು ದುರುz್ದÉೀಶದಿಂದ ಈ ರೀತಿ ತಿರುಚಿz್ದÁರೆ ಎಂದು ಹರಿಹಾಯ್ದರು.

ಆರ್‍ಎಸ್‍ಎಸ್ ಮುಖಂಡ ಭಾಗವತ್, ಸಂಸದ ಅನಂತ್‍ಕುಮಾರ್ ಹೆಗ್ಡೆ, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಸಂವಿಧಾನವನ್ನು ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದ್ದರು. ಈ ವೇಳೆ ಬಿಜೆಪಿ ನಾಯಕರು ಆಕ್ಷೇಪಿಸಲಿಲ್ಲ. ಅಂದು ಬಿಜೆಪಿಯಲ್ಲಿರುವ ದಲಿತ ನಾಯಕರು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರಲ್ಲದೆ, ಬಿಜೆಪಿ ನಾಯಕರು ಅಪಪ್ರಚಾರ ಮಾಡಿದ ಕೂಡಲೇ ದಲಿತ ಸಮುದಾಯ ಬಲಿಯಾಗುವುದಿಲ್ಲ. ಬಿಜೆಪಿ ನಾಯಕರು ಹೇಳಿದಂತೆ ಕೇಳಲು ದಲಿತರು ಅಜ್ಞಾನಿಗಳಲ್ಲ ಎಂದು ಅವರು ಹೇಳಿದರು.

ದಲಿತ ಸಮುದಾಯ ಪ್ರಜ್ಞಾವಂತವಾಗಿದ್ದು, ಸತ್ಯಾಸತ್ಯತೆ ಅವ ಲೋಕಿಸುತ್ತಾರೆ. ದೇಶ ಮತ್ತು ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸದೇ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದೇಶವನ್ನು ಒಡೆ ಯುವ ಮೂಲಕ ರಾಜಕಾರಣ ನಡೆಸುತ್ತಿರುವ ಬಿಜೆಪಿ, ಕಾಂಗ್ರೆಸ್‍ನ ದೊಡ್ಡ ಶಕ್ತಿಯಾಗಿರುವ ಜಾತಿ, ಮತಗಳನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಶ್ವ ಹಸಿವಿನ ಪ್ರಮಾಣ ಹೆಚ್ಚಿರುವ ರಾಷ್ಟ್ರಗಳಲ್ಲಿ ಭಾರತ 101ನೇ ಸ್ಥಾನದಲ್ಲಿದೆ. ಭಾರತಕ್ಕಿಂತಲೂ ಬಾಂಗ್ಲಾದೇಶದ ಹಸಿವಿನ ಪ್ರಮಾಣ ಕಡಿಮೆ ಇದೆ. ಶ್ರೀಲಂಕಾ ಹಾಗೂ ಪಾಕಿಸ್ತಾನದಲ್ಲೂ ಕಡಿಮೆ ಇದೆ. ಹಸಿವು ಮುಕ್ತ ಭಾರತ, ಹಸಿವು ಮುಕ್ತ ಕರ್ನಾಟಕ ಮಾಡಬೇಕು ಎಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಕ್ತಾರ ಹೆಚ್.ಎ.ವೆಂಕಟೇಶ್, ಮಾಜಿ ಮೇಯರ್ ಅಯೂಬ್‍ಖಾನ್ ಇದ್ದರು