ಹನೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ವಿದ್ಯಾ ಸಿರಿ, ಆರೋಗ್ಯ ಭಾಗ್ಯ, ಅನ್ನಭಾಗ್ಯ ಮುಂತಾದ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಪಾರ ಜನ ಮನ್ನಣೆ ಗಳಿಸಿದೆ ಎಂದು ಇಂಧನ ಸಚಿವ ಡಿ. ಕೆ. ಶಿವಕುಮಾರ್ ತಿಳಿಸಿದರು.
ಹನೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಶಾಸಕ ನರೇಂದ್ರ ಅವರ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಹನೂರು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಇಲ್ಲಿನ ಶಾಸ ಕರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ ಸಮಾನವಾದ ಸೌಲಭ್ಯಗಳನ್ನು ನೀಡುವ ಮೂಲಕ ಜನಪ್ರಿಯ ಶಾಸಕರಾಗಿ ಹೊರಹೊಮ್ಮಿದ್ದಾರೆ ಎಂದರು.
ಶಾಸಕ ಆರ್.ನರೇಂದ್ರ ಮಾತನಾಡಿ, 3500 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ಇನ್ನು ಹೆಚ್ಚಿನ ಅಭಿವೃದ್ದಿಗಾಗಿ ಮತದಾರರು ಬೆಂಬ ಲಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಬಸವರಾಜು, ಮರು ಗದಮಣ , ಲೇಖ, ಮಾಜಿ ಸದಸ್ಯರಾದ ಮಹದೇವನಾಯ್ಕ, ದೇವರಾಜು, ಈಶ್ವರ್, ತಾಪಂ ಅಧ್ಯಕ್ಷ ರಾಜು, ಸದಸ್ಯ ಜವಾದ್ ಅಹಮದ್, ಮುಖಂಡ ರಾದ ಮಂಗಲ ಪುಟ್ಟರಾಜು, ಹನೂರು ಪಟ್ಟಣ ಪಂಚಾ ಯಿತಿ ಅಧ್ಯಕ್ಷೆ ಮಮತಾ, ಉಪಾಧ್ಯಕ್ಷ ಬಸ ವರಾಜು, ಸದಸ್ಯ ರಾಜೂಗೌಡ, ಮುಖಂ ಡರಾದ ಚಿಕ್ಕತಮ್ಮಯ್ಯ, ವೆಂಕಟರಮಣ ನಾಯ್ಡು, ಮಾದೇಶ್ ಇನ್ನಿತರರು ಇದ್ದರು.