ಸೆ.23, ವಿರಾಜಪೇಟೆಯಲ್ಲಿ ಗಣಪತಿ ವಿಸರ್ಜನೆ ವಾಹನಗಳ ಬದಲಿ ಸಂಚಾರ ಮಾರ್ಗದ ವಿವರ

ಮಡಿಕೇರಿ:  ವಿರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 23ರ ಸಂಜೆ 5 ಗಂಟೆಯಿಂದ ಸೆಪ್ಟೆಂಬರ್ 24ರ ಬೆಳಗ್ಗೆ 10 ಗಂಟೆ ವರೆಗೆ ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆಯಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

ವಾಹನಗಳ ಸಂಚಾರ ತಾತ್ಕಾಲಿಕ ಮಾರ್ಗದ ಬದಲಾವಣೆ ವಿವರ ಇಂತಿದೆ: ಸೆಪ್ಟೆಂಬರ್ 23 ರಂದು ವಿರಾಜಪೇಟೆ ಪಟ್ಟಣದಲ್ಲಿ ನಡೆಯುವ ಗೌರಿ ಗಣೇಶ ಉತ್ಸವ ಪ್ರಯುಕ್ತ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗಣೇಶ ಮಂಟಪಗಳಿಗೆ ಅಲಂಕರಿಸಿ ಮೆರವಣಿಗೆಯಲ್ಲಿ ವಿರಾಜಪೇಟೆ ಪಟ್ಟಣದ ಎಪ್‍ಎಂಸಿ ರಸ್ತೆ, ಗೋಣಿಕೊಪ್ಪ ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಮೀನು ಪೇಟೆ ಮುಖಾಂತರ ಗೌರಿ ಕೆರೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 9 ಗಂಟೆಗೆ ವಿಸರ್ಜನೆ ಮಾಡುತ್ತಾರೆ. ಈ ಕೆಳಕಂಡಂತೆ ವಿರಾಜಪೇಟೆ ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.

ಪೆರಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನ ಗಳನ್ನು ವಿರಾಜಪೇಟೆ ತಾಲೂಕು ತಹಶೀಲ್ದಾರ್‍ರವರ ಕಚೇರಿಯ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೋಸ್ಟ್-ಬಾಳುಗೋಡು-ಬಿಟ್ಟಂಗಾಲ ಜಂಕ್ಷನ್-ಕೈಕೇರಿ ಜಂಕ್ಷನ್-ಸಿ.ಎಂ. ಪೂಣಚ್ಚನವರ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ-ಸಿದ್ದಾಪುರಕ್ಕೆ ಹೋಗುವುದು.

ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ- ಬಿಟ್ಟಂಗಾಲ-ಬಾಳುಗೋಡು-ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು.ಮಡಿಕೇರಿಯಿಂದ ಕೇರಳದ ಕಡೆ ಹೋಗುವ ವಾಹನಗಳು ಸಿದ್ದಾಪುರ-ಪಾಲಿಬೆಟ್ಟ-ಕೈಕೇರಿ-ಬಿಟ್ಟಂಗಾಲ-ಬಾಳುಗೋಡು-ಪೆರುಂಬಾಡಿ-ಮಾಕುಟ್ಟ ಮಾರ್ಗವಾಗಿ ಹೋಗುವುದು. ಮಡಿಕೇರಿ ಕಡೆಯಿಂದ ಮೈಸೂರು-ಬೆಂಗಳೂರಿಗೆ ಹೋಗುವ ವಾಹನ ಗಳು ಸಿದ್ದಾಪುರ ಮಾರ್ಗವಾಗಿ ಗೋಣೆಕೊಪ್ಪ-ಮೈಸೂರು, ಬೆಂಗಳೂರಿಗೆ ಹೋಗುವುದು. ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವಿರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್ (ಡೆಂಟಲ್ ಕಾಲೇಜ್ ಜಂಕ್ಷನ್) ಮತ್ತು ರವಿರಾಜ್ ಗ್ಯಾಸ್ ಏಜೆನ್ಸಿ ಕಛೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದ್ದು. ಗೋಣಿÉಕೂಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನಗಳನ್ನು ಪಂಜರುಪೇಟೆಯ ಸರ್ವೋದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲುಗಡೆ ಮಾಡುವುದು.

ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರ ವಣಿಗೆ ನೋಡಲು ಬರುವಂತಹ ವಾಹನಗಳು ತಾಲೋಕು ಮೈದಾನದಲ್ಲಿ ಹಾಗೂ ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದು.
ಮೈಸೂರು-ಬೆಂಗಳೂರು ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ-ಸಿದ್ದಾಪುರ ಮಾರ್ಗವಾಗಿ ಮಡಿಕೇರಿ ಹೋಗುವುದು.
ಸೆಪ್ಟೆಂಬರ್ 23 ರಂದು ಸಂಜೆ 5 ಗಂಟೆಯಿಂದ ಸೆಪ್ಟೆಂಬರ್ 24 ಬೆಳಿಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖ್ಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್‍ಎಸಿ ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವಿರಾಜಪೇಟೆ ತಾಲೂಕು ತಹಶೀಲ್ದಾರ್‍ರವರ ಕಛೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸರ್ವೋದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‍ನಿಂದ ದಖ್ಖನಿ ಮೊಹಲ್ಲಾ ಜಂಕ್ಷನ್‍ವರೆಗೆ ಯಾವುದೇ ವಾಹನಗಳನ್ನು ನಿಲ್ಲಿಸುವುದನ್ನು ನಿಷೇಧಿಸಿದೆ. ಮೇಲಿನ ವಾಹನ ಸಂಚಾರ ನಿಯಮವು ಸೆಪ್ಟೆಂಬರ್ 23ರ ಸಂಜೆ 5 ಗಂಟೆಯಿಂದ ಸೆಪ್ಟೆಂಬರ್ 24ರ ಬೆಳಗ್ಗೆ 10 ಗಂಟೆಯವರೆಗೆ ಜಾರಿಯಲ್ಲಿದ್ದು, ಆನಂತರ ಎಂದಿನಂತೆ ವಾಹನ ಸಂಚಾರ ವ್ಯವಸ್ಥೆ ನಡೆಯುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.