ಮಾದಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ಪ್ರಶಸ್ತಿ
ಮೈಸೂರು

ಮಾದಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ಪ್ರಶಸ್ತಿ

October 5, 2018

ಹೆಚ್.ಡಿ.ಕೋಟೆ: ತಾಲೂಕಿನ ಮಾದಾಪುರ ಗ್ರಾಮ ಪಂಚಾಯಿತಿಯು 2017-18 ಸಾಲಿನ ಪ್ರತಿಷ್ಠಿತ ಗಾಂಧಿ ಪುರ ಸ್ಕಾರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಅ.2ರಂದು ಬೆಂಗಳೂರಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇ ಗೌಡರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿ ಲೋಕೇಶ್ ಪ್ರಶಸ್ತಿಯನ್ನು ಸ್ವೀಕರಿಸಿ ದರು. ಮೈಸೂರು ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳ ಗಾಲ, ನಾಯಕನಹುಂಡಿ, ಗುಜ್ಜಪ್ಪನ ಹುಂಡಿ, ಬಸಾಪುರ, ಹೊಳೆಹುಂಡಿ ಗ್ರಾಮಗಳಿದ್ದು, ಈ ಗ್ರಾಮಗಳ ವ್ಯಾಪ್ತಿ ಯಲ್ಲಿ ಸ್ವಚ್ಛತೆ, ತೆರಿಗೆ ವಸೂಲಿ, ದಾಖ ಲಾತಿ ನಿರ್ವಹಣೆ, ಪ್ರಗತಿ ಸೂಚ್ಯಂಕ ಉದ್ಯೋಗ ಖಾತ್ರಿ ಯೋಜನೆಯಲ್ಲಿ 46 ಲಕ್ಷ ರೂ.ಗಳ ಬಳಕೆ, 14ರ ಹಣಕಾಸು ಯೋಜನೆಯಡಿ 25 ಲಕ್ಷ ರೂ. ಅನುದಾನ ಬಳಕೆ ಮಾಡಲಾಗಿದೆ. ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಶೌಚಾಲಯಗಳ ನಿರ್ಮಾಣ ದಿಂದ ಶೇ.100ರಷ್ಟು ಬಯಲು ಮುಕ್ತ ಗ್ರಾಪಂ ಎಂಬ ಹೆಗ್ಗಳಿಕೆ ಪಡೆದು ಕೊಂಡಿದೆ.

ಗ್ರಾಪಂ ಅಧ್ಯಕ್ಷ ಕಾಳಪ್ಪ ಮಾತನಾಡಿ ನಮ್ಮ ಪಂಚಾಯಿತಿಗೆ ಗಾಂಧಿ ಪುರಸ್ಕಾರ ಸಿಕ್ಕಿರುವುದು ಸಂತಸವಾಗಿದೆ. ಹಾಗೇ ಈ ಪ್ರಶಸ್ತಿ ಸಿಗಲು ಮಾಜಿ ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಜನರ ಸಹಕಾರದಿಂದ ದೊರಕಿದೆ. ಈ ಪ್ರಶಸ್ತಿಯಿಂದ ಗ್ರಾಮ ಪಂಚಾಯಿತಿಗೆ 5 ಲಕ್ಷ ರೂ.ಗಳ ವಿಶೇಷ ಅನುದಾನ ಸಿಗಲಿದ್ದು, ಗ್ರಾಮದ ಮೂಲಭೂತ ಸೌಕರ್ಯಗಳಿಗೆ ಬಳಸುವುದಾಗಿ ತಿಳಿಸಿದರು.

Translate »