ಮೈಸೂರಲ್ಲಿ ಗ್ಯಾಂಗ್ ರೇಪ್; ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಗ್ಯಾಂಗ್ ರೇಪ್; ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

August 27, 2021

ಮೈಸೂರು,ಆ.೨೬(ಪಿಎಂ)- ಮೈಸೂ ರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂ ಹಿಕ ಅತ್ಯಾಚಾರ ಖಂಡಿಸಿ ಗುರುವಾರ ಮೈಸೂರಿನಲ್ಲಿ ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದು, ಶೀಘ್ರವೇ ಅತ್ಯಾ ಚಾರಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಲಾಯಿತು.

ಎಬಿವಿಪಿ: ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ (ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್) ಕಾರ್ಯ ಕರ್ತರು, ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಚಾಮುಂಡಿಬೆಟ್ಟದ ತಪ್ಪಲಿ ನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂ ಹಿಕ ಅತ್ಯಾಚಾರ ಪ್ರಕರಣ ಸಾಂಸ್ಕೃತಿಕ ನಗರಿ ಮೈಸೂರಿಗೆ ಕಪ್ಪುಚುಕ್ಕೆಯಾಗಿದೆ. ಶೀಘ್ರವೇ ಅತ್ಯಾಚಾರಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಹೆಣ್ಣನ್ನು ತಾಯಿಯ ರೂಪದಲ್ಲಿ ಕಾಣುವ ಶ್ರೇಷ್ಠ ಸಂಸ್ಕೃತಿ ಹೊಂದಿರುವ ದೇಶ ನಮ್ಮದು. ಅಲ್ಲದೇ ಮೈಸೂರು ತನ್ನದೇ ಆದ ಘನತೆ ಗೌರವಕ್ಕೆ ಭಾಜನವಾಗಿದೆ. ಇಂತಹ ನಗರದಲ್ಲಿ ಈ ರೀತಿಯ ಘಟನೆ ನಡೆದಿ ರುವುದು ನಾಗರಿಕ ಸಮಾಜ ತಲೆ ತಗ್ಗಿಸು ವಂತಾಗಿದೆ. ಮುಂದಿನ ೨೪ ಗಂಟೆ ಯೊಳಗೆ ಅತ್ಯಾಚಾರಿಗಳನ್ನು ಬಂಧಿಸ ಬೇಕು ಎಂದು ಆಗ್ರಹಿಸಿದರು.
ಮೈಸೂರು ನಗರದಲ್ಲಿನ ನಿರ್ಜನ ಪ್ರದೇಶ ಗಳನ್ನು ಪಟ್ಟಿ ಮಾಡಿ ಅಲ್ಲಿ ಅನೈತಿಕ ಚಟು ವಟಿಕೆ ನಡೆದಂತೆ ಕ್ರಮ ಕೈಗೊಳ್ಳಬೇಕು. ನಿರ್ಜನ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹಾಕಬೇಕು ಎಂದು ಒತ್ತಾಯಿಸಿದರು. ಸಂಘ ಟನೆ ಮುಖಂಡರಾದ ಶ್ರೀರಾಮ, ಮಲ್ಲಪ್ಪ, ಕಿರಣ, ನಮೃತಾ, ನಿಶ್ಚಿತಾ, ಕೃಪಾಲ ಸೇರಿ ದಂತೆ ಕಾಲೇಜು ವಿದ್ಯಾರ್ಥಿಗಳು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿವಿಧ ಸಂಘಟನೆಗಳು: ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್), ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈ ಸೇಷನ್ (ಎಐಡಿಎಸ್‌ಓ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗ ನೈಸೇಷನ್ (ಎಐಡಿವೈಓ) ಸಂಯುಕ್ತಾಶ್ರಯ ದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅತ್ಯಾಚಾರಿಗಳನ್ನು ಶೀಘ್ರವೇ ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು. ಕಾಲೇಜು ವಿದ್ಯಾ ರ್ಥಿನಿಯರು ಪ್ರೇಕ್ಷಣ Ãಯ ಸ್ಥಳಗಳಿಗೆ ಭೇಟಿ ನೀಡಿದಾಗ ಯುವಕರು ಹಿಂಬಾ ಲಿಸುವುದು ಹಾಗೂ ಚುಡಾಯಿಸುವ ಕೃತ್ಯ ಗಳು ಹೆಚ್ಚಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಬೇಕು. ನಗರ ಪೊಲೀಸರು ಗಸ್ತು ತಿರುಗುವ ಮೂಲಕ ಇಂತಹ ಕೃತ್ಯಗಳನ್ನು ಮಟ್ಟಹಾಕಬೇಕು. ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ದಂತಹ ಘಟನೆಗಳು ಮತ್ತೆ ಮರುಕಳಿ ಸದಂತೆ ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆಗಳ ಮುಖಂಡರಾದ ಜಿ.ಎಸ್. ಸೀಮಾ, ಟಿ.ಆರ್.ಸುನೀಲ್, ಸುಭಾಷ್, ಆಸೀಯಾ ಬೇಗಂ, ಸುಮಾ, ಸವಿತಾ ನೀತುಶ್ರೀ ಸೇರಿದಂತೆ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

ಮಹಿಳಾ ಕಾಂಗ್ರೆಸ್: ಮೈಸೂರಿನ ಕಾಂಗ್ರೆಸ್ ಭವನದ ಆವರಣದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿ ಭಟನೆ ನಡೆಸಲಾಯಿತು. ಹೆಣ್ಣು ಮಕ್ಕಳಿಗೆ ಈ ಬಿಜೆಪಿ ಆಡಳಿತದಲ್ಲಿ ರಕ್ಷಣೆ ಇಲ್ಲ. ಹೆಣ್ಣು ಮಕ್ಕಳಿಗೆ ಇವರ ಆಡಳಿತದಲ್ಲಿ ಸ್ವಾತಂತ್ರ್ಯವಿಲ್ಲ ಎಂಬುದಕ್ಕೆ ಮೈಸೂ ರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯಿಂದ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡರಾದ ಮಂಜುಳಾ ಮಾನಸ, ಪಾಲಿಕೆ ಸದಸ್ಯೆ ಶೋಭಾ ಸುನಿಲ್, ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಪುಷ್ಪವಲ್ಲಿ, ಮೈಸೂರು ಗ್ರಾಮಾಂತರ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಗಂಧದಗುಡಿ ಫೌಂಡೇಶನ್ ವತಿ ಯಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಫೌಂಡೇಶನ್ ಅಧ್ಯಕ್ಷ ಆರ್ಯನ್, ಉಪಾ ಧ್ಯಕ್ಷ ಮನೋಹರ್, ಪದಾಧಿಕಾರಿಗಳಾದ ಮೇಘನ್, ಅಭಿಷೇಕ್, ದೇವರಾಜ್ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Translate »