ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಪ.ಜಾ. ರೈತರಿಂದ ಅರ್ಜಿ ಆಹ್ವಾನ
ಚಾಮರಾಜನಗರ

ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಪ.ಜಾ. ರೈತರಿಂದ ಅರ್ಜಿ ಆಹ್ವಾನ

August 2, 2018

ಚಾಮರಾಜನಗರ:  ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತಿಸಣ್ಣ ರೈತರಿಂದ ಗಂಗಾಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 18 ರಿಂದ 60 ವರ್ಷದೊಳಗಿನ ವಯೋ ಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಾಗಿದ್ದಲ್ಲಿ 98 ಸಾವಿರ ರೂ. ಹಾಗೂ ನಗರ ಪ್ರದೇಶದವರಾಗಿದ್ದಲ್ಲಿ 1 ಲಕ್ಷದ 20 ಸಾವಿರ ರೂ. ಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.

ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತಿ ಸಣ್ಣ ರೈತರುಗಳು ಹೊಂದಿರುವ ಕನಿಷ್ಟ 1.20 ಗುಂಟೆ ಎಕರೆಯಿಂದ ಗರಿಷ್ಟ 5 ಎಕರೆವರೆಗಿನ ಖುಷ್ಕಿ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲಾಗುವುದು. ಅರ್ಜಿಯೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರದ ಪ್ರತಿ, ವರಮಾನ ಪತ್ರ, ಪಹಣಿ ಪ್ರತಿ, ಆಧಾರ್ ಕಾರ್ಡ್, ಗುರುತಿನ ಚೀಟಿ, ಪಡಿತರ ಚೀಟಿ, ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಲಗತ್ತಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 31ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಅಥವಾ ದೂ.ಸಂಖ್ಯೆ 08226-224133 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Translate »