ಮೈಸೂರು: ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಮೈಸೂರಿನ ಮಂಚೇಗೌಡನ ಕೊಪ್ಪಲಿನಿಂದ ವರದಿಯಾಗಿದೆ. ಅಲ್ಲಿನ ನಿರ್ಮಲ ಎಂಬುವರ ಪುತ್ರಿ ಎನ್.ನಂದಿನಿ (18) ಕೂರ್ಗಳ್ಳಿ ಕೈಗಾರಿಕಾ ಪ್ರದೇಶದ ಲ್ಲಿರುವ ಸಾಯಿ ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುತ್ತಿದ್ದರು. ಜ.11 ರಂದು ಬೆಳಿಗ್ಗೆ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ ಈಕೆ ಸಂಜೆ ವಾಪಸ್ ಬರದೇ ಇದ್ದಾಗ ಆಕೆಯ ಮೊಬೈಲ್‍ಗೆ ಕರೆ ಮಾಡಿದಾಗ ಸಿದ್ದಗಂಗೆಯಲ್ಲಿರುವುದಾಗಿಯೂ ಅಲ್ಲಿಯೇ ಕೆಲಸಕ್ಕೆ ಸೇರಿ ಕೊಳ್ಳುವುದಾಗಿಯೂ ತಿಳಿಸಿ ಕರೆ ಕಟ್ ಮಾಡಿದ್ದಾರೆ. ನಂತರ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಯುವತಿಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹೆಬ್ಬಾಳ್ ಠಾಣೆ ಪೊಲೀಸರು, ಈಕೆಯ ಬಗ್ಗೆ ಮಾಹಿತಿ ಇರುವವರು ಹೆಬ್ಬಾಳ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0821-2418318 ಅಥವಾ ನಗರ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 2418339 ಅನ್ನು ಸಂಪರ್ಕಿಸುವಂತೆ ಕೋರಿದ್ದಾರೆ.