ಗ್ಯಾಸ್ ಸಿಲಿಂಡರ್ ಕಳ್ಳತನ
ಮೈಸೂರು

ಗ್ಯಾಸ್ ಸಿಲಿಂಡರ್ ಕಳ್ಳತನ

July 6, 2018

ಹಿರೀಕ್ಯಾತನಹಳ್ಳಿ:  ಇಲ್ಲಿನ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಬೀಗ ಮುರಿದು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿರುವ ಘಟನೆ ಹುಣಸೂರು ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೈಸ್ಕೂಲ್ ಬಡಾವಣೆಯಲ್ಲಿ ರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ರಾತ್ರಿ ವೇಳೆ ಕೊಠಡಿಯಲ್ಲಿದ್ದ ಯಾವುದೇ ವಸ್ತುಗಳನ್ನು ಮುಟ್ಟದೆ ಭರ್ತಿಯಾಗಿರುವ ಸಿಲಿಂಡರ್ ಅನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕ ದೊಡ್ಡಸ್ವಾಮಿ ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆಗೆ ದೂರು ನೀಡಿದ್ದಾರೆ.

Translate »