ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ
ಮೈಸೂರು

ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ

February 26, 2021

ಮುಂಬೈ,ಫೆ.25-ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದ ಕಾರು ಪತ್ತೆ ಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿ 20 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸ್ಥಳಕ್ಕೆ ಎಟಿಎಸ್, ಮುಂಬೈ ಕ್ರೈಂ ಬ್ರ್ಯಾಂಚ್ ಪೆÇಲೀ ಸರು ಭೇಟಿ ಕೊಟ್ಟಿದ್ದಾರೆ. ಶ್ವಾನದಳ, ಬಾಂಬ್ ಪತ್ತೆ & ನಿಷ್ಕ್ರಿಯ ದಳದ ತಜ್ಞರು ದೌಡಾಯಿಸಿದ್ದಾರೆ.

ಮುಕೇಶ್ ಅಂಬಾನಿಯವರ ಅಂತಿಲ್ಲಾ ನಿವಾಸದ ಬಳಿ ಸ್ಕಾರ್ಪಿಯೊ ವಾಹನ ವೊಂದು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ಭದ್ರತಾ ಸಿಬ್ಬಂದಿ ಪೆÇಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ, ಸ್ಥಳಕ್ಕೆ ಬಂದ ಪೆÇಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಜಿಲೆಟಿನ್ ಕಡ್ಡಿಗಳು ಇರುವುದು ಕಂಡುಬಂದಿದೆ.

ಇನ್ನು, ಈ ಕುರಿತು ಪ್ರತಿಕ್ರಿಯಿಸಿದ ಮುಂಬೈ ಪೆÇಲೀಸ್ ವಕ್ತಾರ ಚೈತನ್ಯ ವಾಹನದಲ್ಲಿ ಸ್ಫೋಟಕ ಜಿಲೆಟಿನ್ ಕಡ್ಡಿಗಳು ಇರುವುದು ಪತ್ತೆಯಾಗಿದೆ. ಆದರೆ, ಇದು ಬಾಂಬ್ ಮಾದರಿಯಲ್ಲಿ ರೂಪಿಸಿರುವುದಾಗಿ ಸದ್ಯಕ್ಕೆ ಕಂಡುಬಂದಿಲ್ಲ. ಸದ್ಯ, ತನಿಖೆ ಮುಂದುವರಿದಿದೆ ಎಂದು ತಿಳಿಸಿದರು. ಅಂದ ಹಾಗೆ, ಈ ಸ್ಕಾರ್ಪಿಯೊ ವಾಹನದ ನೋಂದಣಿ ಸಂಖ್ಯೆ ಉದ್ಯಮಿಯ ಭದ್ರತಾ ಸಿಬ್ಬಂದಿ ಬಳಸುವ ವಾಹನಗಳಿಗೆ ಹೋಲುತ್ತದೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ. ಜೊತೆಗೆ, ವಾಹನದಿಂದ ಪತ್ರವೊಂದು ಸಹ ದೊರೆತಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

Translate »