ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ
ಚಾಮರಾಜನಗರ

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018: ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರ ಭೇಟಿಗೆ ಅವಕಾಶ

April 27, 2018

ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನೇಮಕವಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರನ್ನು ಸಾರ್ವಜನಿಕರು ಭೇಟಿ ಮಾಡಲು ಅವಕಾಶವಿದ್ದು ಭೇಟಿಯ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಲಾಗಿದೆ.

ಹನೂರು ವಿಧಾನಸಭಾ ಕ್ಷೇತ್ರದ ವೀಕ್ಷಕ ವಜೀರ್ ಸಿಂಗ್ ಗೋಯಟ್ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದು. ಇವರ ಮೊಬೈಲ್ ಸಂಖ್ಯೆ 9480580400 ಆಗಿರುತ್ತದೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಲಕ್ಷ್ಮಿನಾರಾಯಣ ಸೋನಿ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದಾಗಿದೆ. ಇವರ ಮೊಬೈಲ್ ಸಂಖ್ಯೆ 9483287292 ಆಗಿದೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಮನೋಜ್ ಕುಮಾರ್ ಅವರನ್ನು ಚಾಮರಾಜನಗರÀ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಂಜೆ 4 ರಿಂದ 5 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದಾಗಿದೆ. ಇವರ ಮೊಬೈಲ್ ಸಂಖ್ಯೆ 9483647292 ಆಗಿದೆ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಅನಿಲ್ ಕುಮಾರ್ ಅವರನ್ನು ಗುಂಡ್ಲುಪೇಟೆ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದಾಗಿದೆ ಇವರ ಮೊಬೈಲ್ ಸಂಖ್ಯೆ 9483747292, 09451597287 ಆಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕರಟಣೆಯಲ್ಲಿ ತಿಳಿಸಿದ್ದಾರೆ.

Translate »