ಡಿಸಿ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ
ಕೊಡಗು

ಡಿಸಿ ಅಧ್ಯಕ್ಷತೆಯಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ

August 23, 2022

ಮಡಿಕೇರಿ, ಆ.22- ಜನರಲ್ ತಿಮ್ಮಯ್ಯ ಸ್ಮಾರಕ ಭವನ ಕಾರ್ಯ ಚಟುವಟಿಕೆ ಸಂಬಂಧ `ಸ್ಮಾರಕ ಭವನ ನಿರ್ವಹಣಾ ಸಮಿತಿ’ ಸಭೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನ ಸ್ವಾಮಿ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಸುತ್ತುಗೋಡೆ ನಿರ್ಮಾಣಕ್ಕೆ ಸರ್ಕಾ ರದಿಂದ 25 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಅವರು, ಗೌರವಾನ್ವಿತ ರಾಷ್ಟ್ರಪತಿಗಳು ಆಗಮಿಸಿದ್ದ ಸಂದರ್ಭದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಸುಮಾರು 34 ಲಕ್ಷ ರೂ. ವೆಚ್ಚದ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲಾ ಗಿದ್ದು, ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಸುತ್ತುಗೋಡೆ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಹಣಕ್ಕೆ ಸಂಬಂಧಿಸಿ ದಂತೆ ಸರ್ಕಾರದ ನಿಯಮದಂತೆ ಕ್ರಮ ವಹಿಸಬೇಕಿದೆ ಎಂದರು.

ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಮುಖ್ಯ ರಸ್ತೆ ಬದಿ ವಾಹನ ನಿಲುಗಡೆ ಸಂಬಂಧ ನಗರಸಭೆ ವತಿಯಿಂದ ಟೆಂಡರ್ ಆಹ್ವಾನಿಸಿ, ವಾಹನ ನಿಲುಗಡೆ ಶುಲ್ಕದಲ್ಲಿ ಶೇ.25 ರಷ್ಟು ಹಣವನ್ನು ಜನರಲ್ ತಿಮ್ಮಯ್ಯ ಸ್ಮಾರಕ ಭವನ ಚಟುವಟಿಕೆಗೆ ಭರಿಸುವಂತೆ ನಗರಸಭೆ ಇಂಜಿನಿಯರ್‍ಗೆ ಜಿಲ್ಲಾಧಿಕಾರಿ ತಿಳಿಸಿದರು.
ಈ ಬಗ್ಗೆ ಮಾತನಾಡಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಮುಖ್ಯರಸ್ತೆ ಬಳಿ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಸೇರಿದ 6 ಅಡಿ ಅಷ್ಟು ಜಾಗವನ್ನು ಕಾಯ್ದಿರಿಸಿ, ತಡೆಗೋಡೆ ನಿರ್ಮಾಣ ಮಾಡಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಈಗಾಗಲೇ ಎರಡು ಬೋರ್‍ವೆಲ್‍ಗಳಿದ್ದು, ಒಂದು ಕಾರ್ಯ ನಿರ್ವಹಿಸುತ್ತಿದೆ. ಮತ್ತೊಂದು ದುರಸ್ತಿಯಾಗಿದೆ. ಬೇಸಿಗೆ ಅವಧಿಯಲ್ಲಿ ಉದ್ಯಾನ ವನಕ್ಕೆ ನೀರು ಪೂರೈಸುವುದು ಕಷ್ಟಸಾಧ್ಯವಾ ಗಿದೆ ಎಂದು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಗೈಡ್ ಆಗಿ ಕಾರ್ಯ ನಿರ್ವಹಿಸು ತ್ತಿರುವ ತಿಮ್ಮಯ್ಯ ಸಭೆಯ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರಸಭೆ ಯಿಂದ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಇಂಜಿನಿಯರ್‍ಗೆ ಸೂಚಿಸಿದರು.

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ನಮೂನೆ-3 ನ್ನು ಕೂಡಲೇ ಒದಗಿಸುವಂತೆ ನಗರಸಭೆ ಇಂಜಿನಿಯರ್‍ಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಧ್ವಜ ಸ್ತಂಭ ನಿರ್ಮಾಣ ಮಾಡುವಂತಾಗಬೇಕು ಎಂದು ಕಾರ್ಗಿಲ್ ವಿಜಯ್ ದಿವಸದಂದು ಮೇಜರ್ ಚಿಂಗಪ್ಪ ಅವರು ಮನವಿ ಮಾಡಿದ್ದು, ಈ ಬಗ್ಗೆ ಸೈನಿಕ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಮತ್ತು ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರು ಪರಿಶೀಲಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಜಿಪಂ ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಸೈನಿಕ ಕಲ್ಯಾಣ ಇಲಾಖೆಯ ಮೇಜರ್ ಬಾಲಸುಬ್ರಹಣ್ಯಂ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕರಾದ ಹರ್ಷ, ತಹಸೀಲ್ದಾರ್ ಪಿ.ಎಸ್.ಮಹೇಶ್, ನಗರಸಭೆ ಎಇಇ ಎಂ.ಎಸ್.ರಾಜೇಂದ್ರಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಹಲವು ಮಾಹಿತಿ ನೀಡಿದರು. ಜಿಲ್ಲಾ ಉದ್ಯೋಗ ವಿನಿಯಮಾಧಿಕಾರಿ ಉಮಾ, ವಿದ್ಯಾರ್ಥಿನಿ ಮೋನಿಷಾ.ಡಿ.ಆರ್ ಇತರರಿದ್ದರು.

Translate »