ಬಡ ಹೃದ್ರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ
ಮೈಸೂರು

ಬಡ ಹೃದ್ರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಕುಮಾರಸ್ವಾಮಿ ಸಲಹೆ

September 9, 2018

ಬೆಂಗಳೂರು:  ಬಡವರು, ಶ್ರೀಮಂತರು ಎಂಬ ಭೇದವಿಲ್ಲದೆ ಹೃದ್ರೋಗಗಳು ಎಲ್ಲರಲ್ಲೂ ಕಾಣಿಸಿಕೊಳ್ಳುತ್ತವೆ. ಬಡರೋಗಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಖಾಸಗಿ ಸಂಸ್ಥೆಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಕರೆ ನೀಡಿದರು.

ನಗರದಲ್ಲಿ ಹೃದಯ ಮತ್ತು ಶ್ವಾಸಕೋಶ ಶಸ್ತ್ರ ಚಿಕಿತ್ಸಕರ ಸಂಸ್ಥೆಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, 1960ರಲ್ಲಿ ಹೃದಯಾಘಾತಗಳ ಪ್ರಮಾಣ ಶೇ.4ರಷ್ಟಿತ್ತು, ಈಗ ಶೇ.12ರಷ್ಟಾಗಿದೆ, 2020ರ ಒಳಗೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದರು.

ಮಧುಮೇಹ, ರಕ್ತದೊತ್ತಡದಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಅಧಿಕವಾಗಿವೆ, ಈ ಮೊದಲು ವಯಸ್ಸಾದವರಿಗೆ, ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ ಎಂಬ ನಂಬಿಕೆ ಇತ್ತು, ಇತ್ತೀಚಿನ ದಿನಗಳಲ್ಲಿ ಬಡವರು, ಕೊಳಗೇರಿಗಳಲ್ಲಿ ವಾಸಿಸುವವರು ಮತ್ತು ಗ್ರಾಮೀಣ ಭಾಗದ ಜನರಿಗೂ ಹೃದಯ ಸಂಬಂಧಿ ಕಾಯಿಲೆಗಳು ಸಾಮಾನ್ಯವಾಗಿವೆ.

ಹೃದ್ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಬೆಂಗಳೂರಿನ ಜಯದೇವ ಸಂಸ್ಥೆ ಮಾದರಿಯಾಗಿದೆ, ಅಪೋಲೊ ಆಸ್ಪತ್ರೆ ಸೇರಿದಂತೆ ಅನೇಕ ಪ್ರತಿಷ್ಠಿತ ಸಂಸ್ಥೆಗಳು ಹೃದ್ರೋಗಕ್ಕೆ ಚಿಕಿತ್ಸೆ ನೀಡುತ್ತಿವೆ ಎಂದರು.

Translate »