ಎರಡು ಡೋಸ್ ಲಸಿಕೆ ನೀಡಿದ  ನಂತರವೇ ತರಗತಿ, ಪರೀಕ್ಷೆ ನಡೆಸಿ
ಮೈಸೂರು

ಎರಡು ಡೋಸ್ ಲಸಿಕೆ ನೀಡಿದ ನಂತರವೇ ತರಗತಿ, ಪರೀಕ್ಷೆ ನಡೆಸಿ

July 8, 2021

ಮೈಸೂರು: ರಾಜ್ಯದಲ್ಲಿ ಡಿಪ್ಲೊಮಾ, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ, ಫಾವರ್iಸಿ ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳಿಗೂ ಎರಡು ಡೋಸ್ ಲಸಿಕೆ ನೀಡುವವರೆಗೂ ಆಫ್‍ಲೈನ್ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬಾರದು ಎಂದು ವಿದ್ಯಾರ್ಥಿಗಳು ಹಲವು ದಿನಗಳಿಂದ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯದಿಂದ ವರ್ತಿಸುತ್ತಿದೆ ಎಂದು ಆರೋಪಿಸಿ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಓ) ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್‍ನ ಎರಡು ಡೋಸ್ ಲಸಿಕೆ ನೀಡಿದ ನಂತರವೇ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ನೀಡಿದರು. ಎಐಡಿಎಸ್‍ಓ ಜಿಲ್ಲಾ ಉಪಾಧ್ಯಕ್ಷೆ ಆಸಿಯಾ ಬೇಗಂ ಮತ್ತಿತರರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Translate »