ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ
ಮೈಸೂರು

ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ

March 18, 2019

ಪಣಜಿ: ತೀವ್ರ ಅನಾ ರೋಗ್ಯದಿಂದ ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ರಾಗಿದ್ದಾರೆ. 63 ವರ್ಷದ ಮನೋ ಹರ್ ಪರಿಕ್ಕರ್ ಕಳೆದ ಒಂದು ವರ್ಷ ದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗ್ರಂಥಿ ಸಮಸ್ಯೆ) ಯಿಂದ ಬಳಲುತ್ತಿದ್ದರು. ಅಲ್ಲದೇ ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು. ಗೋವಾ, ಮುಂಬೈ, ನವದೆಹಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರ ಮೂಗಿಗೆ ಪೈಪ್ ಅಳವಡಿಸಲಾಗಿತ್ತು. ಹಾಗಿದ್ದರೂ ಕೂಡ ಬಜೆಟ್ ಅಧಿವೇಶದಲ್ಲಿ ಭಾಗವಹಿಸಿ ಬಜೆಟ್ ಮಂಡನೆ ಮಾಡಿದ್ದರು.

ಗೋವಾದ ತಮ್ಮ ಖಾಸಗಿ ನಿವಾಸದಲ್ಲೇ ಹೆಚ್ಚಿನ ಸಮಯ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದ ಅವರು ಅಲ್ಲಿಂದಲೇ ಸರ್ಕಾರದ ಆಡಳಿತವನ್ನು ನಿರ್ವಹಿಸುತ್ತಿದ್ದರು. ಆದರೆ ಫೆಬ್ರವರಿ ಅಂತ್ಯದಲ್ಲಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದಲೂ ಅವರ ಆರೋಗ್ಯದ ಮೇಲೆ ನಿಗಾವಹಿಸಿದ್ದ ವೈದ್ಯರ ತಂಡ ಸೂಕ್ತ ಚಿಕಿತ್ಸೆ ನೀಡುತ್ತಿದ್ದರು. 1955 ಡಿಸೆಂಬರ್ 13ರಂದು ಜನಿಸಿದ ಪರಿಕ್ಕರ್ 1978ರಲ್ಲಿ ಬಾಂಬೆ ಐಐಟಿಯಿಂದ ಪದವಿಯನ್ನು ಪಡೆದಿದ್ದರು. ಯುವಕರಾಗಿದ್ದ ವೇಳೆಯೇ ಅವರು ಆರ್ ಆರ್ ಎಸ್ ನಲ್ಲಿ ಗುರುತಿಸಿಕೊಂಡಿದ್ದರು. ಆ ಬಳಿಕ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರದಲ್ಲಿ ಒಬ್ಬರಾಗಿ ಬೆಳೆದರು.

1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಗಿ ಆಯ್ಕೆ ಆಗಿದ್ದ ಅವರು, 2000 ದಿಂದ 2005 ಹಾಗೂ 2012ರಿಂದ 2014ರ ವರೆಗೂ ಗೋವಾ ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು. ಆ ಬಳಿಕ 2017 ಮಾರ್ಚ್ 14ರಂದು ಮತ್ತೆ ಗೋವಾ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು. 2013 ಲೋಕಸಭಾ ಚುನಾವಣೆಗೂ ಮುನ್ನ ಮನೋಹರ್ ಪರಿಕ್ಕರ್ ಬಿಜೆಪಿಯಿಂದ ಪ್ರಧಾನಿ ಹುದ್ದೆಯ ಅಭ್ಯರ್ಥಿಯಾಗಿಯೂ ಗುರುತಿಸಿಕೊಂಡಿ ದ್ದರು. ಆದರೆ 2014 ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೇಶದ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿ ಕೊಂಡಿದ್ದರು. 2017ರ ಮಾರ್ಚ್ ವರೆಗೂ ಸಚಿವರಾಗಿ ಮುಂದುವರೆದಿದ್ದರು, ಆದರೆ ಗೋವಾ ರಾಜ್ಯ ರಾಜಕೀಯದಲ್ಲಿ ನಡೆದ ಬದಲಾವಣೆಗಳ ಕಾರಣದಿಂದ ಮತ್ತೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡರು. 2018 ಅಕ್ಟೋಬರ್ 27ರಂದು ಅವರಿಗೆ ಕ್ಯಾನ್ಸರ್ ಇರುವುದಾಗಿ ಘೋಷಣೆ ಮಾಡಿತ್ತು. ಅಮೆರಿಕಾ ಸೇರಿದಂತೆ ಹಲವು ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು.

Translate »