ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ
ಮಂಡ್ಯ

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ

August 9, 2018

ಭಾರತೀನಗರ: ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಮದ್ದೂರು ತಾಪಂ ಇಓ ಚೇತನ್‍ಕುಮಾರ್ ತಿಳಿಸಿದರು.

ಇಲ್ಲಿನ ಸಬ್ಬನಹಳ್ಳಿ ಗ್ರಾಮದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆ-2018ರಡಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿ, ತಾವೇ ಸ್ವತಃ ಪೊರಕೆರಕೆ ಹಿಡಿದು ಕಸ ಗುಡಿಸುವ ಮೂಲಕ ಪರಿಸರ ಸ್ವಚ್ಛವಾಗಿಡುವಂತೆ ದೇಶವಾಸಿಗಳಿಗೆ ಕರೆ ನೀಡಿದರು ಎಂದರು.

ಪರಿಸರ ಸ್ವಚ್ಛವಾಗಿದ್ದರೆ ಜನತೆಯ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತದೆ. ಪರಿಸರ ಅನೈರ್ಮಲ್ಯದಿಂದ ಆರೋಗ್ಯ ಸಮಸ್ಯೆ ವೃದ್ಧಿಸುವುದಲ್ಲದೆ, ಸೊಳ್ಳೆ, ಕ್ರಿಮಿಕೀಟಗಳ ಆವಾಸ ಸ್ಥಾನವಾಗಿ ಪರಿವರ್ತಿತವಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಸ್ವಚ್ಛತಾ ಕಾರ್ಯ ನಡೆಸುವಂತೆ ಸರ್ಕಾರವೇ ಯೋಜನೆ ರೂಪಿಸಿದೆ ಎಂದರು. ಸುತ್ತಮುತ್ತಲ ಪರಿಸರದಲ್ಲಿ ನೀರು ನಿಲ್ಲ ದಂತೆ ನೋಡಿಕೊಳ್ಳಬೇಕು. ಮನೆಯಲ್ಲಿ ಶೇಖರಿಸಿರುವ ನೀರನ್ನು ಕಾಲ ಕಾಲಕ್ಕೆ ಬದಲಾಯಿಸಬೇಕು. ಇಲ್ಲದಿದ್ದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಇದರಿಂದಾಗಿ ಡೆಂಗ್ಯೂ, ಚಿಕೂನ್ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಕಾಡುತ್ತದೆ. ಇದನ್ನು ತಪ್ಪಿಸಲು ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಈ ವೇಳೆ ಗ್ರಾಪಂ ಸದಸ್ಯರು, ಎಸ್‍ಡಿಎಂಸಿ ಸದಸ್ಯರು, ಕೂಲಿ ಕಾರ್ಮಿಕರು, ಹಿರಿಯ ವಿದ್ಯಾರ್ಥಿಗಳ ಸಂಘ, ಸ್ವಸಹಾಯ ಸಂಘದ ಕಾರ್ಯಕರ್ತರು ಸೇರಿದಂತೆ ಇತರರು ಗ್ರಾಮದಲ್ಲಿ ಪೊರಕೆ ಹಿಡಿದು ಬೀದಿಗಳನ್ನು ಸ್ವಚ್ಛಗೊಳಿಸಿ, ಮನೆ ಮನೆಗೆ ಭೇಟಿ ನೀಡಿ ಶೌಚಾಲಯ, ಸ್ವಚ್ಛತೆ, ಪರಿಸರ ರಕ್ಷಣೆ, ಆರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಇತರೆ ಸಾಮಾಜಿಕ ಕರ್ತವ್ಯಗಳ ಕುರಿತಂತೆ ಜನತೆಗೆ ಅರಿವು ಮೂಡಿಸಿದರು.

ಪಿಡಿಓ ಎನ್. ಸುಧಾ, ಗ್ರಾಪಂ ಅಧ್ಯಕ್ಷೆ ಸುಮಲತಾ, ಮುಖಂಡ ರಾದ ಎಸ್.ಡಿ.ಹೊನ್ನೇಗೌಡ, ಸದಸ್ಯರಾದ ಎಸ್.ಎನ್.ಶಿವಲಿಂಗೇ ಗೌಡ, ಪುಟ್ಟಲಿಂಗಾಚಾರಿ, ಸುಮತಿ, ಎಸ್‍ಡಿಎಂಸಿ ಅಧ್ಯಕ್ಷ ಮಹೇಶ್, ದೊರೆಸ್ವಾಮಿ, ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರು, ಕೂಲಿ ಕಾರ್ಮಿಕರು, ಮುಖಂಡರಾದ ಭಕ್ತಪ್ರಹ್ಲಾದ, ಕುಮಾರ ಇತರರಿದ್ದರು.

Translate »