ಗುಂಡ್ಲುಪೇಟೆಯಲ್ಲಿ ಬಂದ್‍ಗೆ ಉತ್ತಮ ಪ್ರತಿಕ್ರಿಯೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಬಂದ್‍ಗೆ ಉತ್ತಮ ಪ್ರತಿಕ್ರಿಯೆ

September 28, 2021

ಗುಂಡ್ಲುಪೇಟೆ, ಸೆ.27(ಸೋಮ್.ಜಿ)- ಕೃಷಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಗಳಿಗೆ ತಿದ್ದುಪಡಿ ವಿರೋಧಿಸಿ ರೈತ ಸಂಘ, ಹಸಿರು ಸೇನೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‍ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮುಂಜಾನೆ 6 ಗಂಟೆಯಿಂದಲೇ ರಸ್ತೆ ಗಿಳಿದ ರೈತ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಕಾರ್ಯ ಕರ್ತರು ಎಲ್ಲಾ ಅಂಗಡಿ ಮುಂಗಟ್ಟುಗಳ ಮಾಲೀಕರ ಮನವೊಲಿಸಿ ಬಾಗಿಲು ಮುಚ್ಚಿಸಿ ದರು. ನಂತರ ಬೆಂಗಳೂರು- ನೀಲಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶಿವಮಲ್ಲು, ರೈತ ಮುಖಂಡರಾದ ಕಡಬೂರು ಮಂಜುನಾಥ್, ಕುಂದಕೆರೆ ಸಂಪತ್ತು, ಮಾಡ್ರಹಳ್ಳಿ ಮಹದೇವಪ್ಪ, ಶಿವಪುರ ಮಹದೇವಪ್ಪ, ಮಹೇಶ್, ಮಾಧು, ಕಾಂಗ್ರೆಸ್ ಮುಖಂಡರಾದ ಹೆಚ್.ಎಸ್. ನಂಜಪ್ಪ, ಎಲ್.ಸುರೇಶ್, ಕರ್ನಾಟಕ ಕಾವಲು ಪಡೆ ಅಧ್ಯಕ್ಷ ಅಬ್ದುಲ್ ಮಾಲೀಕ್, ಕರವೇ ಅಧ್ಯಕ್ಷ ಸುರೇಶ್‍ನಾಯಕ್, ಪ್ರವೀಣ್‍ಶೆಟ್ಟಿ ಬಣದ ಅಧ್ಯಕ್ಷ ಮೋಹನ್, ಎಸ್‍ಡಿಪಿಐ ಅಧ್ಯಕ್ಷ ಇಮ್ರಾನ್ ಖಾನ್, ಪುರಸಭೆ ಸದಸ್ಯ ರಾದ ಮಧು, ರಾಜಗೋಪಾಲ್, ಸುಭಾಷ್ ಸೇರಿದಂತೆ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಪಟ್ಟಣ ಠಾಣೆ ಸರ್ಕಲ್‍ಇನ್ಸ್‍ಪೆಕ್ಟರ್ ಮಹ ದೇವಸ್ವಾಮಿ, ಸಬ್‍ಇನ್ಸ್‍ಪೆಕ್ಟರ್ ಆರ್. ರಾಜೇಂದ್ರ, ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಶಿವಶಂಕರಪ್ಪ ಮತ್ತು ಸಿಬ್ಬಂದಿಗಳು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು. ಪ್ರತಿ ಭಟನೆಯಲ್ಲಿ ಯಾವುದೇ ರೀತಿಯ ಅಹಿತ ಕರ ಘಟನೆಗಳು ವರದಿಯಾಗಿಲ್ಲ.

 

Translate »