ಗಾಂಧಿ ಜಯಂತಿ ಅಂಗವಾಗಿ ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದಿಂದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದವರೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ `ಸದ್ಭಾವನಾ ನಡಿಗೆ’ ನಡೆಸಲಾಯಿತು.
ಇದಕ್ಕೂ ಮೊದಲು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರದೆದುರು ದೀಪ ಬೆಳಗಿಸಿ ಸದ್ಭಾವನಾ ನಡಿಗೆಗೆ ಚಾಲನೆ ನೀಡಲಾಯಿತು. ಕ್ರೈಸ್ತ, ಮುಸ್ಲಿಂ, ಹಿಂದೂ ಧರ್ಮಗುರುಗಳ ಸಮ್ಮುಖದಲ್ಲಿ ಕಾಂಗ್ರೆಸ್ ಕಚೇರಿಯಿಂದ ಹೊರಟ ಸದ್ಭಾವನಾ ನಡಿಗೆ ನಾರಾಯಣಶಾಸ್ತ್ರಿ ರಸ್ತೆ ಮೂಲಕ ಸ್ವಾತಂತ್ರ್ಯ ಹೋರಾಟ ಗಾರರ ಉದ್ಯಾನವನ ತಲುಪಿತು. ಅಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕ ತನ್ವೀರ್‍ಸೇಠ್, ಮೇಯರ್ ಪುಷ್ಪಲತಾ ಜಗನ್ನಾಥ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಾಧಾ ಮಣಿ, ವಕ್ತಾರೆ ಮಂಜುಳಾ ಮಾನಸ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.